ವಿವೇಕ ವಾರ್ತೆ : ಬೆಂಗಳೂರಿನ ಔಟರ್ ರಿಂಗ್ ರೋಡ್‌ನ ಕಲ್ಯಾಣನಗರ ಬ್ರಿಡ್ಜ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.
ಹಾಸನ ಮೂಲದ ನೇಮರಾಜು (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ವೇಗವಾಗಿ ಬಂದ ಟ್ರಕ್‌ವೊಂದು ಮುಂದಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಐದಾರು ವಾಹನಗಳು ಜಖಂಗೊಂಡಿವೆ.
ನಾಲ್ಕು ಕಾರು ಹಾಗೂ ದ್ವಿಚಕ್ರ ವಾಹನ ಪುಡಿ ಪುಡಿ ಆಗಿದೆ. ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನೇಮರಾಜು ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬಾಣಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.