ವಿವೇಕ ವಾರ್ತೆ : ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವಿಡಿಯೋವೊಂದನ್ನು ಶೇರ್ ಮಾಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು.
ಬಳಿಕ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು. ಸೆಪ್ಟೆಂಬರ್ 26ರಂದು ಅವರ ಉಸಿರಾಟ ತೊಂದರೆಯ ಕಾರಣ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು
ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಆಕೆಗೆ ಆಸ್ತಮಾ ಇದ್ದು, ಚಿಂತಿಸುವ ಅಗತ್ಯವಿಲ್ಲ. ನಾವು ಇನ್ನೂ 2-3 ದಿನಗಳವರೆಗೆ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅಪೊಲೊದಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮಾಹಿತಿ ನೀಡಿದ್ದಾರೆ.