ವಿವೇಕ ವಾರ್ತೆ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ, ಎರಡು ದೇಹ ಒಂದೇ ಪ್ರಾಣ ಎನ್ನುವಂತೆ ಇದ್ದ ಜೀವದ ಗೆಳೆಯರಿಬ್ಬರೂ ಸಾವಿನಲ್ಲೂ ಕೂಡ ಒಂದಾದ ಘಟನೆ ನಡೆದಿದೆ.
ಜೀವದ ಗೆಳೆಯರಾದ ಆನಂದ್ (30) ಹಾಗೂ ಸಾಗರ್ (35) ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಶಿಕಾರಿಪುರ ತಾಲೂಕಿನ ಪುಣೇದಹಳ್ಳಿಯ ಆನಂದ್ ಹಾಗೂ ನವರಾಜ್, ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕ್‌ನಲ್ಲಿ ಹೋಗುತ್ತಿದ್ದರು.
ಈ ವೇಳೆ ಶಿಕಾರಿಪುರ ಮತ್ತು ಶಿರಾಳಕೊಪ್ಪದ ನಡುವೆ ಇರುವ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಸಮೀಪ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅದೃಷ್ಟವಶಾತ್ ಬೈಕ್ ನಲ್ಲಿದ್ದ ಇನ್ನೋರ್ವ ಯುವಕ ಬದುಕುಳಿದಿದ್ದಾನೆ.
ಇನ್ನೂ ಬೈಕ್ ನಲ್ಲಿ ತೆರಳುವ ವೇಳೆ ಆನಂದ್ ಮೃತಪಟ್ಟಿದ್ದಾನೆ ಎನ್ನುವ ಸುದ್ದಿ ಬರಸಿಡಿಲಿನಂತೆ ಬಂದು ತಿಳಿಯುತ್ತಿದ್ದಂತೆ ಆತನ ಸ್ನೇಹಿತ ಸಾಗರ್ ಕೂಡಾ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.