Tuesday, September 26, 2023

ಸೈಬರ್ ಕ್ರೈಂ ಆರೋಪಿಯಿಂದ ಸುಲಿಗೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಕರ್ನಾಟಕದ ಪೊಲೀಸರ ಅಮಾನತು

ವಿವೇಕವಾರ್ತೆ :ಸೈಬರ್ ವಂಚನೆ ಆರೋಪಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಕರ್ನಾಟಕದ ನಾಲ್ವರು ಪೊಲೀಸರನ್ನು ಇಂದು ಅಮಾನತು ಮಾಡಲಾಗಿದೆ.

ಈ ಸಂಬಂಧ ಎಸಿಪಿ ನೀಡಿದ ವರದಿ ಮೇರೆಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಅಮಾನತುಗೊಂಡ ಪೊಲೀಸರನ್ನು ಇನ್ಸ್ ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್ ಸ್ಟೇಬಲ್ ಗಳಾದ ವಿಜಯ್ ಕುಮಾರ್, ಶಿವಣ್ಣ ಮತ್ತು ಕಾನ್ ಸ್ಟೇಬಲ್ ಸಂದೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನ ಸೈಬರ್ ಕ್ರೈಮ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಉದ್ಯೋಗ ಕೊಡಿಸುವ ನೆಪದಲ್ಲಿ 26 ಲಕ್ಷ ರೂಪಾಯಿ ವಂಚಿಸಲಾಗಿದೆ ಎಂದು ಶ್ರೀಕಾಂತ್ ಎಂಬುವರು ಜೂನ್ 16ರಂದು ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಡಿಕೇರಿ ಮೂಲದ ಐಸಾಕ್ ಎಂಬಾತನ ಖಾತೆಗೆ ತನಿಖೆಯ ವೇಳೆ 10,000 ರೂ. ವರ್ಗಾವಣೆ ಆಗಿರುವುದು ತನಿಖೆ ವೇಳೆ ಪತ್ತೆಯಾಗಿತ್ತು. ಐಸಾಕ್​ ವಿಚಾರಣೆ ವೇಳೆ ಬ್ಯಾಂಕ್ ಖಾತೆಯನ್ನು ರಾಜೇಶ್ ಎಂಬಾತನ ಪರವಾಗಿ ತೆರೆಯಲಾಗಿದೆ ಎಂಬುದನ್ನು ಅರಿತ ಪೊಲೀಸರು ಆತನ ವಿಚಾರಣೆ ನಡೆಸಿದ್ದರು. ಈ ವೇಳೆ ಕೇರಳದ ನೌಶಾದ್‌ನ ಹೆಸರು ಹೊರಬಂದಿತ್ತು.

ಹೀಗಾಗಿ ಆರೋಪಿ ಪೊಲೀಸ್ ತಂಡ ಕೇರಳದ ಕಲ್ಲೇಂಚೇರಿಗೆ ತೆರಳಿ ನೌಶಾದ್ ನನ್ನು ವಶಕ್ಕೆ ಪಡೆದು 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಹಣ ನೀಡಲು ವಿಫಲವಾದರೆ ಕ್ರಿಪ್ಟೋ ಕರೆನ್ಸಿ ಪ್ರಕರಣದಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನೌಶಾದ್ ಕರ್ನಾಟಕ ಪೊಲೀಸರ ವಿರುದ್ಧ ಕಲಮಶ್ಶೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರನ್ವಯ ತನಿಖೆ ನಡೆಸಿ ಸದ್ಯ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!