ಗಣೇಶನ ಪೂಜೆ ಮಾಡಿದ ವಿದ್ಯಾರ್ಥಿನಿ ಕೈ ಮುರಿದ ಶಿಕ್ಷಕಿ ಸಸ್ಪೆಂಡ್.!

Published on

spot_img
spot_img

ವಿವೇಕ ವಾರ್ತೆ : ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿಯ ಕೈಯನ್ನು ಮುಖ್ಯ ಶಿಕ್ಷಕಿ ಮುರಿದಿರುವ ಘಟನೆ ನಡೆದಿದೆ.

ಶಾಲೆಯ ಮುಖ್ಯ ಶಿಕ್ಷಕಿಯ ವಿರುದ್ಧ ವಿದ್ಯಾರ್ಥಿನಿಗೆ ಥಳಿಸಿದ ಆರೋಪ ಕೇಳಿಬಂದಿತ್ತು.

ತಪ್ಪು ಮಾಡಿದ್ದ ಶಿಕ್ಷಕಿ ವಿರುದ್ದ ಕ್ರಮ ಕೈಗೊಳ್ಳದೆ, ವರ್ಗಾವಣೆ ಮಾಡಿ ಘಟನೆ ಮರೆಮಾಚಲು ಯತ್ನಿಸಿದ್ದ ಅಧಿಕಾರಿಗಳು ಇದೀಗ ಮತ್ತೆ ಶಿಕ್ಷಕಿಯ ಸಸ್ಪೆಂಡ್​ ಮಾಡಿದ್ದಾರೆ.

ಶಾಲೆಯ 7 ನೇ ತರಗತಿ ವಿಧ್ಯಾರ್ಥಿನಿ ಭವ್ಯಶ್ರೀಗೆ ಶಿಕ್ಷಕಿ ಹೇಮಲತಾ ಹೊಡೆದ ಮೇಲೆ ವಿದ್ಯಾರ್ಥಿನಿಯ ಕೈ ಮುರಿದಿದೆ. ಶಾಲೆಯಲ್ಲಿ ಗಣಪತಿ ವಿಗ್ರಹಕ್ಕೆ ಪೂಜೆ ಮಾಡಿದ್ದಕ್ಕೆ, ಕೈ ಮೂಳೆ ಮುರಿಯುವಂತೆ ಹೊಡೆದಿದ್ದರು ಎಂದು ಪೋಷಕರು ಶಿಕ್ಷಕಿಯ ವಿರುದ್ಧ ದೂರು ನೀಡಿದ್ದರು.

ಶಿಕ್ಷಕಿ ಹೇಮಲತಾ ಹೊಡೆದ ಪರಿಣಾಮ, ವಿಧ್ಯಾರ್ಥಿನಿ ಭವ್ಯಶ್ರೀ ಎಡಗೈ ಮೂಳೆ ಮುರಿತವಾಗಿತ್ತು‌. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬರುತ್ತದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!