Wednesday, September 27, 2023

ಹನಿಮೂನ್ ಗೆ ಬಂದು ಗಂಡನನ್ನು ಬಿಟ್ಟುಹೋದ ಹೆಂಡತಿ..!

ವಿವೇಕವಾರ್ತೆ : ಹೊಸದಾಗಿ ಮದುವೆಯಾದ ಜೋಡಿಯೊಂದು ಹನಿಮೂನ್ (Honeymoon) ಬಂದು, ಪತಿಯನ್ನು ಹೋಟೆಲ್‍ನಲ್ಲಿಯೇ ಪತ್ನಿ ಬಿಟ್ಟು ಹೋಗಿರುವ ಅಚ್ಚರಿಯ ಪ್ರಕರಣವೊಂದು ರಾಜಸ್ಥಾನದ ಜೈಪುರದಿಂದ ಬೆಳಕಿಗೆ ಬಂದಿದೆ.

ಪತಿಯೊಂದಿಗೆ ಹೋಟೆಲ್ (Hotel) ವಿಚಾರವಾಗಿ ಈಕೆ ಪತಿ ಜೊತೆ ಮುನಿಸಿಕೊಂಡಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ರಿಂಗಾಸ್‍ನಲ್ಲಿರುವ ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲೆಂದು ವಾಹನ ಬುಕ್ ಮಾಡಲು ಪತಿ ಹೋದಾಗ ಆತನನ್ನು ಕೋಪದಿಂದ ಪತ್ನಿ ಬಿಟ್ಟು ಹೋಗಿದ್ದಾಳೆ.

ಮಧ್ಯಪ್ರದೇಶದ (Madhyapradesh) ಭೋಪಾಲ್ ಮೂಲದ ದಂಪತಿ ಜುಲೈ 29 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಬಳಿಕ ಹನುಮೂನಿಗೆಂದು ಆಗಸ್ಟ್ 5 ರಂದು ಜೈಪುರಕ್ಕೆ ಬಂದಿದ್ದು, ಚೌಮು ಪುಲಿಯಾ ಸಮೀಪದ ಹೋಟೆಲ್‍ನಲ್ಲಿ ತಂಗಿದ್ದರು. ಮರುದಿನ ಬೆಳಗ್ಗೆ ದಂಪತಿ ಜೈಪುರ ಸುತ್ತಾಡಿ ನಂತರ ಅಮೇರ್ ಫೋರ್ಟ್‍ಗೆ ಭೇಟಿ ನೀಡಿದರು.

ಸಂಜೆ 3 ಗಂಟೆ ಸುಮಾರಿಗೆ ಹೋಟೆಲ್‍ಗೆ ಹಿಂದಿರುಗಿದರು. ಇದಾದ ಬಳಿಕ ಅವರು ಬಾಬಾ ಖತುಶ್ಯಾಮ್ ಜಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಜಿಸಿದ್ದರು. ಅಂತೆಯೇ ಪತಿ ವಾಹನ ಬುಕ್ ಮಾಡಲು ತೆರಳಿದರು. ಹೀಗೆ ಹೋದವನು ವಾಪಸ್ ರೂಮಿಗೆ ಬರುವಾಗ ಪತ್ನಿ ತನ್ನ ಲಗೇಜ್‍ನೊಂದಿಗೆ ಕಾಣೆಯಾಗಿದ್ದಳು. ಇದನ್ನು ಕಂಡ ಪತಿ ದಿಗ್ಭ್ರಮೆಗೊಂಡನು.

ಆಕೆಗಾಗಿ ಇಡೀ ಹೋಟೆಲ್‍ನಲ್ಲಿ ಹುಡುಕಾಟ ನಡೆಸಿದನು. ಎಲ್ಲಯೂ ಸಿಗದೇ ಇದ್ದಾಗ ಆಕೆಯ ಮೊಬೈಲ್ ನಂಬರಿಗೆ ಕರೆ ಮಾಡಿದ್ದಾನೆ. ಆದರೆ ಆಕೆ ಕರೆ ಸ್ವೀಕರಿಸುತ್ತಿರಲಿಲ್ಲ. ಬಳಿಕ ಅವರು ಹೋಟೆಲ್‍ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಆಕೆ ಫೋನ್‍ನಲ್ಲಿ ಮಾತನಾಡುತ್ತಾ ಹೋಟೆಲ್‍ನಿಂದ ಹೊರಟು ಹೋಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪತಿ ಝೋತ್ವಾರಾ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!