ವಿವೇಕ ವಾರ್ತೆ : ಮುಂದಿನ 2 ದಿನ ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಜಿಲ್ಲೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ವಾರಗಳಿಗೆ ಹೋಲಿಕೆ ಮಾಡಿದರೆ ಮಳೆ ಪ್ರಮಾಣ ಕಡಿಮೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.