ಹವಾಲಾ ದಂಧೆ – ಕಾರಿನಲ್ಲಿ 2 ಕೋಟಿ ರೂ. ಪತ್ತೆ, 8 ಮಂದಿ ಅರೆಸ್ಟ್

Published on

spot_img
spot_img

ಲಕ್ನೋ: ನೋಯ್ಡಾದಲ್ಲಿ (Noida) ಕಾರೊಂದರಲ್ಲಿ 2 ಕೋಟಿಗೂ ಹೆಚ್ಚು ಹಣವನ್ನು ಸಾಗಿಸುತ್ತಿದ್ದ ಹಿನ್ನೆಲೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಹಣವನ್ನು ವಶಪಡೆಸಿಕೊಂಡಿದ್ದಾರೆ.

ನಗದು ಹವಾಲಾ ದಂಧೆಯದ್ದಾಗಿರಬಹುದು (Hawala Business) ಎಂದು ಶಂಕಿಸಲಾಗಿದ್ದು, ವಶಕ್ಕೆ ಪಡೆದ ಹಣವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಅಹಮದಾಬಾದ್‍ನ ಜಯಂತಿ ಭಾಯ್, ದೆಹಲಿಯ ಸಂದೀಪ್ ಶರ್ಮಾ, ದೆಹಲಿಯ ವಿನಯ್ ಕುಮಾರ್, ವಾಯುವ್ಯ ಬಂಗಾಳದ ಅಭಿಜೀತ್ ಹಜ್ರಾ, ನೋಯ್ಡಾ ಸೆಕ್ಟರ್ -56 ರ ರೋಹಿತ್ ಜೈನ್, ದೆಹಲಿಯ ವಿಪುಲ್, ಮುಂಬೈನ ಮಿನೇಶ್ ಶಾ ಮತ್ತು ಇಂದೋರ್‌ನ ಅನುಜ್ ಎಂದು ಗುರುತಿಸಲಾಗಿದೆ.

ಪೊಲೀಸರು ಹಣ ವಶಪಡಿಸಿಕೊಳ್ಳುತ್ತಿದ್ದಂತೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (Income Tax Department) ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹವಾಲಾ ದಂಧೆಗೆ 2 ಕೋಟಿ ರೂ. ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗುತ್ತಿದ್ದು, ಇದೀಗ ಬಂಧಿತರೆಲ್ಲರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹವಾಲಾ ದಂಧೆ ನಡೆಸುತ್ತಿರುವ ಕೆಲವರು ಸೆಕ್ಟರ್-55ರಲ್ಲಿ ಡೀಲ್ ಮಾಡಲು ಬರುತ್ತಿದ್ದಾರೆ. ಇವರ ಬಳಿ ಸಾಕಷ್ಟು ಹಣವಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರ ತಂಡ ಕಾರನ್ನು ಅಡ್ಡಹಾಕಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!