ವಿವೇಕ ವಾರ್ತೆ : ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಗ್ರಾನೆಟ್ ಉದ್ಯಮಿಯೊಬ್ಬರ ಕೊಲೆಯಾಗಿದೆ.
ಕೊಲೆಯಾದ ವ್ಯಕ್ತಿ ಮಾಜಿ ಸಚಿವ ಎಚ್.ಡಿ ರೇವಣ್ಣ ಅತ್ಯಾಪ್ತ ಶ್ರೀರಾಮ ಮಾರ್ಬಲ್ಸ್ ಮಾಲೀಕ ಜೆಡಿಎಸ್ ಮುಖಂಡ ಕೃಷ್ಣೇಗೌಡ (55) ಎಂದು ಹೇಳಲಾಗುತ್ತಿದೆ.
ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.
ಗ್ರಾನೈಟ್ ಫ್ಯಾಕ್ಡರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.