ಬೆಳಗಾವಿ : ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಪೋಕ್ಸೊ ಕಾಯ್ದೆಯಡಿ ವಿಚಾರಣೆ ಎದುರಿಸುತ್ತಿದ್ದ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವನನ್ನು ಕಿತ್ತೂರು ತಾಲ್ಲೂಕು ಬಚ್ಚನಕೇರಿ ಗ್ರಾಮದ ಮಂಜುನಾಥ್ ನಾಯ್ಕರ್ (20) ಎಂದು ಗುರುತಿಸಲಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 3 ತಿಂಗಳ ಹಿಂದೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿ ಆತನನ್ನು ಬಂಧಿಸಲ್ಪಟ್ಟು ಹಿಂಡಲಗಾ ಜೈಲು ಸೇರಿದ್ದ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ತಿಳಿದುಬಂದಿಲ್ಲ.ಶನಿವಾರ ರಾತ್ರಿ ಹಿಂಡಲಗಾ ಜೈಲಿನಲ್ಲಿ ಪಾಳುಬಿದ್ದ ಕೊಠಡಿಗೆ ಹೋದ ಮಂಜುನಾಥ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಅದನ್ನು ಗಮನಿಸಿದ ಪೊಲೀಸರು ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಭಾನುವಾರ ಬೆಳಿಗ್ಗೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.