ವಿವೇಕ ವಾರ್ತೆ : ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಇಂದು ಮೃತರ ಮರಣೋತ್ತರ ಪರೀಕ್ಷೆಯಲ್ಲಿ ಸಾವಿನ ರಹಸ್ಯ ಬಹಿರಂಗವಾಗಿದೆ.
ವೀರಾರ್ಜುನ್ ವಿಜಯ್ (31), ಅವರ ಪತ್ನಿ ಹೇಮಾವತಿ (29), ಮಕ್ಕಳಾದ 2 ವರ್ಷದ ಮೋಕ್ಷಾ ಮೇಘನಯನಾ, 8 ತಿಂಗಳ ಸೃಷ್ಠಿ ಸುನಯನಾ ಮೃತಪಟ್ಟವರು ಎಂದು ತಿಳಿದುಬಂದಿದೆ.
ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿತ್ತು, ಈ ವೇಳೆ ನಾಲ್ವರ ಸಾವಿನ ರಹಸ್ಯ ಬಹಿರಂಗವಾಗಿದ್ದು, ಪತ್ನಿ ಹೇಮಾವತಿ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಪತ್ನಿ ಹೇಮಾವತಿ ಕತ್ತಿನ ಭಾಗದಲ್ಲಿ ಕೈ ಗುರುತುಗಳು ಬಿದ್ದಿದ್ದು, ದೇಹದ ಬಣ್ಣ ಬದಲಾಗಿದೆ. ಒಂದನೇ ತಾರೀಖಿನಂದು ಹೆಂಡತಿಗೆ ಬಲವಂತವಾಗಿ ವಿಷ ಕೊಟ್ಟು ಕತ್ತು ಹಿಸುಕಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ತಂದೆಯೇ ಮಕ್ಕಳ ಕತ್ತನ್ನು ವೇಲ್’ನಿಂದ ಬಿಗಿದು ಕೊಂದು, ಕೊನೆಗೆ ತಾನೂ ನೇಣುಬಿಗಿದುಕೊಂಡು ಸಾವನ್ನಪ್ಪಿದ ದುರಂತ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡುವ ಮುನ್ನವೇ ಮೊಬೈಲ್‌ಗಳನ್ನ ಪತಿ ವೀರಾರ್ಜುನ ಸ್ವಿಚ್ ಅಫ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆ :
ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೀರಾರ್ಜುನ್ ವಿಜಯ್, 6 ವರ್ಷಗಳ ಹಿಂದೆ ಹೇಮಾವತಿ ಅವರನ್ನು ಮದುವೆಯಾಗಿದ್ದರು. ಸೀಗೆಹಳ್ಳಿಯ ಸಾಯಿ ಗಾರ್ಡನ್‌ನ ಮನೆಯೊಂದರಲ್ಲಿ ವಾಸವಿದ್ದರು.
ಆದರೆ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಲಾಗಿತ್ತು. ಮನೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮನೆಯ ಬಾಗಿಲನ್ನು ಮುರಿದು ತೆಗೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು.