ವಿವೇಕವಾರ್ತೆ : ಬೆಳ್ಳಂಬೆಳಗ್ಗೆ ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಬಗ್ಗ ವರದಿಯಾಗಿದೆ. ಲಾರಿಗೆ ಒಮಿನಿ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬೆಂಗಳೂರನಿಂದ ಮೈಸೂರು ಕಡೆ ಹೋಗ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜಾಗಿರುವ ಓಮ್ನಿ ಕಾರು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ಶನಿವಾರ ಮುಂಜಾನೆ ಸಂಭವಿಸಿದ ದುರಂತದಲ್ಲಿ ರಾಜೇಶ್ (42), ಉಮಾ (35) ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಅಸುನೀಗಿದ್ದಾರೆ.
ಒಮಿನಿಯಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.