spot_img
spot_img
spot_img
spot_img
spot_img

ಧೋನಿಗೆ 15 ಕೋಟಿ ರೂ. ದೋಖಾ – ಮಾಜಿ ಪಾಲುದಾರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಮಹಿ

Published on

spot_img

ಮುಂಬೈ: 15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಆರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ (Aarka Sports and Management Limited) ಮಿಹಿರ್ ದಿವಾಕರ್ ಮತ್ತು ಸೌಮ್ಯ ವಿಶ್ವಶ್ ವಿರುದ್ಧ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ (MS Dhoni) ರಾಂಚಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ (Criminal Case) ದಾಖಲಿಸಿದ್ದಾರೆ.

ರಾಂಚಿಯಲ್ಲಿ 2017ರ ಕ್ರಿಕೆಟ್ ಅಕಾಡೆಮಿ ಒಪ್ಪಂದಕ್ಕೆ ಸಂಬಂಧಿಸಿ ಆಗಿರುವ ವಂಚನೆ ವಿರುದ್ಧ ಆರ್ಕಾ ಸ್ಪೋರ್ಟ್ಸ್ ಮ್ಯಾನೇಜ್‌ಮೆಂಟ್‌ನ ಇಬ್ಬರು ಅಧಿಕಾರಿಗಳ ವಿರುದ್ಧ ಧೋನಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಿವಾಕರ್ ಒಪ್ಪಂದದಲ್ಲಿದ್ದ ಷರತ್ತುಗಳನ್ನು ಪಾಲಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಏನಿದು ಷರತ್ತು? – ಉಲ್ಲಂಘನೆಯಾಗಿದ್ದು ಹೇಗೆ?
ದಿವಾಕರ್ ಅವರು ಜಾಗತಿಕವಾಗಿ ಕ್ರಿಕೆಟ್ ಅಕಾಡೆಮಿಯನ್ನು ನಡೆಸಲು 2017ರಲ್ಲಿ ಧೋನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದ್ರೆ ಒಪ್ಪಂದದಲ್ಲಿ ಉಲ್ಲೇಖಿಸಲಾದ ಷರತ್ತುಗಳನ್ನ ಪಾಲಿಸಲಿಲ್ಲ. ಅಲ್ಲದೇ ಆರ್ಕಾ ಸ್ಪೋರ್ಟ್ಸ್​​ನ ಶುಲ್ಕ ಮತ್ತು ಷೇರುಗಳನ್ನೂ ಧೋನಿ ಅವರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ.

ಒಪ್ಪಂದಕ್ಕೆ ಸಂಬಂಧಿಸಿದ ಷರತ್ತುಗಳನ್ನು ಉಲ್ಲಂಘನೆ ಕಾರಣ ಆಗಸ್ಟ್ 15, 2021ರಂದು ಧೋನಿ ಅರ್ಕಾ ಸ್ಪೋರ್ಟ್ಸ್‌ಗೆ ನೋಟಿಸ್ ಕಳುಹಿಸಿದ್ದರು. ಇಂತಹ ನೋಟಿಸ್​​ಗಳನ್ನು ಹಲವು ಬಾರಿ ಕಳುಹಿಸಿದರೂ ಪ್ರಯೋಜನವಾಗಲಿಲ್ಲ. ಈ ಬಗ್ಗೆ ಧೋನಿ ಅವರನ್ನು ಪ್ರತಿನಿಧಿಸುತ್ತಿರುವ ವಿಧಿ ಅಸೋಸಿಯೇಟ್ಸ್​​ನ ದಯಾನಂದ್ ಸಿಂಗ್ ಮಾಹಿತಿ ನೀಡಿದ್ದಾರೆ. ಮೋಸ ಮಾಡಿರುವ ಮತ್ತು 15 ಕೋಟಿ ರೂ. ವಂಚನೆ ಮಾಡಿರುವ ಕುರಿತು ತಿಳಿಸಿದ್ದಾರೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ನಿಮಗೆ ಪಿತ್ರಾರ್ಜಿತ ಆಸ್ತಿ ಸಿಕ್ಕಾಗ ಮಾಡಲೇಬೇಕಾದ ಕೆಲಸ- ಇದು ಮಾಡಿದ್ರೆ 100 % ಸೇಫ್

ವಿವೇಕವಾರ್ತೆ : ನಮ್ಮ ದೇಶದಲ್ಲಿ ಆಸ್ತಿಯ ವಿಚಾರಕ್ಕೆ ಬಂದರೆ ಅಲ್ಲಿ ಭಿನ್ನ ಭಿನ್ನವಾದ ವಿಭಾಗಗಳು ಇರುತ್ತವೆ ಹಾಗೂ ಸಾಕಷ್ಟು...

ಅಪ್ಪಿಕೊಳ್ಳೋದ್ರಿಂದ ಆರೋಗ್ಯಕ್ಕೆ ಸಿಗಲಿದೆ ಹಲವು ಬೆನಿಫಿಟ್ – ಇಲ್ಲಿದೆ ಮಾಹಿತಿ!

ಪ್ರೀತಿ, ಸ್ನೇಹ, ಭರವಸೆ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ದೇಹ ಭಾಷೆಯೇ ಅಪ್ಪುಗೆ. ಬನ್ನಿ ಇಂದು ಅಪ್ಪುಗೆಯ ಆರೋಗ್ಯ ಪ್ರಯೋಜನಗಳೇನು ಎಂದು...

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...
error: Content is protected !!