Tuesday, September 26, 2023

2019 ಕ್ಕಿಂತ ಮುಂಚಿನ ವಾಹನಗಳಿಗೆ ಹೊಸ ನಂಬರ್‌ ಪ್ಲೇಟ್‌ ಕಡ್ಡಾಯ: ಈ ದಿನಾಂಕದೊಳಗೆ ಬದಲಿಸಿ, ಇಲ್ಲವೇ ದಂಡ ಕಟ್ಟಿ

ವಿವೇಕವಾರ್ತೆ : ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳು ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‌ (ಎಚ್‌ಎಸ್‌ಆರ್‌ಪಿ) ಹೊಂದುವುದು ಕಡ್ಡಾಯವಾಗಿದೆ ಎಂದು ರಾಜ್ಯ ಸಾರಿಗೆ ಇಲಾಖೆ ತಿಳಿಸಿದೆ.

ಶಾಶ್ವತ ಗುರುತಿನ ಸಂಖ್ಯೆ ಮತ್ತು ಕ್ರೋಮಿಯಂ ಆಧಾರಿತ ಹೊಲೊಗ್ರಾಮ್‌ನಂತಹ ಹಲವಾರು ವೈಶಿಷ್ಟ್ಯಗಳೊಂದಿಗೆ ಈ ನಂಬರ್‌ ಪ್ಲೇಟ್‌ ಸಜ್ಜುಗೊಂಡಿದೆ.ಎಚ್‌ಎಸ್‌ಆರ್‌ಪಿಗಳನ್ನು ಟ್ಯಾಂಪರ್ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಇಲಾಖೆ ಹೇಳಿದೆ.

ನೋಂದಣಿ ಫಲಕಗಳಲ್ಲಿ ( ನಂಬರ್‌ ಪ್ಲೇಟ್‌ ) ಏಕರೂಪತೆಯನ್ನು ಖಚಿತಪಡಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತಾದ ಅಧಿಸೂಚನೆಯನ್ನು ಆಗಸ್ಟ್ 17, 2023 ರಂದು ಹೊರಡಿಸಲಾಗಿದೆ. ಇದಕ್ಕೆ ನವೆಂಬರ್ 17 ರ ಗಡುವನ್ನು ನೀಡಲಾಗಿದೆ. ವಿಫಲವಾದ ವಾಹನ ಮಾಲೀಕರ ವಿರುದ್ಧ ದಂಡದ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ರೂ 500 ರಿಂದ ರೂ 1,000ರ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಸಾರಿಗೆ ಇಲಾಖೆಯ ಅಂದಾಜಿನ ಪ್ರಕಾರ, ಏಪ್ರಿಲ್ 1, 2019 ರ ಮೊದಲು ರಾಜ್ಯದಲ್ಲಿ ಸುಮಾರು 1.75 ಕೋಟಿಯಿಂದ 2 ಕೋಟಿ ವಾಹನಗಳು ನೋಂದಣಿಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಎಪ್ರಿಲ್ 1, 2019 ರಿಂದ ಜಾರಿಗೆ ಬರುವಂತೆ, ಎಲ್ಲಾ ಹೊಸ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ, ವಾಹನ ತಯಾರಕರು ಈ ಪ್ಲೇಟ್‌ಗಳನ್ನು ವಾಹನ ವಿತರಕರಿಗೆ ಪೂರೈಸಲು ಅಧಿಕೃತ ಎಚ್‌ಎಸ್‌ಆರ್‌ಪಿ ತಯಾರಕರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಹಳೆಯ ವಾಹನಗಳಿಗೂ ಸಹ ಅಧಿಕೃತ ಎಚ್‌ಎಸ್‌ಆರ್‌ಪಿ ತಯಾರಕರು ಪ್ಲೇಟ್‌ಗಳನ್ನು ಪೂರೈಸುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಹಳೆಯ ವಾಹನಗಳ ಮಾಲೀಕರು ವಾಹನ ತಯಾರಕರ ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅನ್ನು ಆರ್ಡರ್ ಮಾಡಬಹುದು’ ಎಂದು ಅವರು ಹೇಳಿದ್ದಾರೆ.

ನಾಲ್ಕು ಚಕ್ರಗಳ ವಾಹನಕ್ಕೆ ಎಚ್‌ಎಸ್‌ಆರ್‌ಪಿ ಪ್ಲೇಟ್‌ ಬೆಲೆಯು ರೂ 400 ರಿಂದ ರೂ 500 ರವರೆಗೆ ಇರಲಿದೆ. ದ್ವಿಚಕ್ರ ವಾಹನಗಳಿಗೆ ರೂ 250 ರಿಂದ ರೂ 300 ರ ವರೆಗೆ ಇರಲಿದೆ. ದ್ವಿಚಕ್ರ ವಾಹನಗಳಿಗೆ ಈಗಾಗಲೇ 12 ರಾಜ್ಯಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಈ ನಿಯಮವನ್ನು ಜಾರಿಗೆ ತಂದಿವೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ಎಚ್‌ಎಸ್‌ಆರ್‌ಪಿ ಅವಶ್ಯಕತೆ ಏನು?

ಟ್ಯಾಂಪರಿಂಗ್ ಮತ್ತು ಪ್ಲೇಟ್‌ಗಳನ್ನು ನಕಲಿ ಮಾಡುವುದನ್ನು ತಡೆಯುವ ಎಚ್‌ಎಸ್‌ಆರ್‌ಪಿ ತಡೆಯಲಿದೆ. ವಾಹನಗಳಿಂದ ಉಂಟಾಗುವ ಅಪರಾಧಗಳನ್ನು ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಾಯ ಮಾಡಲಿದೆ. ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಗುರುತಿಸಲು ಸಹಾಯ ಮಾಡುತ್ತದೆ ಎಂದು ಸಾರಿಗೆ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಎಚ್‌ಎಸ್‌ಆರ್‌ಪಿ ಅನ್ನು ಅಳವಡಿಸಿಕೊಂಡ ನಂತರ, ಅಧಿಕೃತ ವಿತರಕರು ಅಥವಾ ತಯಾರಕರು ವಾಹನ್ ಪೋರ್ಟಲ್‌ನಲ್ಲಿ ಲೇಸರ್-ಕೋಡಿಂಗ್ ಅನ್ನು ನವೀಕರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ ತಿಳಿಸಿದೆ.

RELATED ARTICLES

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...
- Advertisment -

Most Popular

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...
error: Content is protected !!