ಪ್ರೇಮಪಾಶಕ್ಕೆ ಬಲಿಯಾದ್ರು ಒಂದೇ ಶಾಲೆಯ 3 ಹೆಣ್ಮಕ್ಕಳು..!

Published on

spot_img
spot_img

ಒಂದೇ ಶಾಲೆಯಲ್ಲಿ ಓದುತ್ತಿರುವ 3 ವಿದ್ಯಾರ್ಥಿನಿಯರು 10 ದಿನಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಈ ಸರಣಿ ಸಾವುಗಳ ಹಿಂದೆ ಇದ್ದದ್ದು ಮಾತ್ರ ಕುರುಡು ಪ್ರೇಮ!

ಒಂದೇ ಶಾಲೆಯ 11-12ನೇ ತರಗತಿಯಲ್ಲಿ ಓದುತ್ತಿರುವ 3 ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ಡಿಸೆಂಬರ್ 10 ರಿಂದ 18ರ ನಡುವೆ ನಡೆದಿವೆ.

ಯಾವುದೇ ಪ್ರಕರಣದಲ್ಲಿ ಯಾವುದೇ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಭಾಗಿಯಾಗಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಮೂರೂ ಪ್ರಕರಣಗಳು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿವೆ ಎಂದು ಸೀತಾಪುರದ ಎಎಸ್​ಪಿ ಮಾಹಿತಿ ನೀಡಿದರು.

ಡಿಸೆಂಬರ್ 10 ರಂದು ನಡೆದ ಮೊದಲ ಆತ್ಮಹತ್ಯೆ ಪ್ರಕರಣದಲ್ಲಿ, ಹುಡುಗಿ ತನ್ನ ನೆರೆಯವನಾದ ರಾಹುಲ್ ಯಾದವ್ ಜೊತೆ ಪ್ರೇಮ ಸಂಬಂಧ ಹೊಂದಿದ್ದಳು. ಅವರ ಸಂಬಂಧವನ್ನು ಹುಡುಗಿಯ ಮನೆಯವರು ಒಪ್ಪಲಿಲ್ಲ. ಹೀಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಾಲಕ ರಾಹುಲ್ ಯಾದವ್​ ಎನ್ನುವಾತನ್ನು ಜೈಲಿಗೆ ಕಳುಹಿಸಲಾಗಿದೆ.

ಎರಡನೇ ಆತ್ಮಹತ್ಯೆ ಘಟನೆ ಡಿ.12 ರಂದು ನಡೆದಿದ್ದು, ಅಂಕಿತ್ ಪಾಸ್ವಾನ್ ಎಂಬ ಹುಡುಗನನ್ನು ಓರ್ವ ಹುಡುಗಿ ಪ್ರೀತಿಸುತ್ತಿದ್ದಳು. ಹುಡುಗಿಯ ಮನೆಯವರು ಈ ಸಂಬಂಧಕ್ಕೆ ಒಪ್ಪಿದರು. ಆದರೆ ಅಂಕಿತ್​ನ ತಾಯಿ ಮದುವೆಗೆ ವರಕ್ಷಿಣೆಯಾಗಿ ಬೈಕ್ ಕೇಳಿದ್ದರು. ಇದರಿಂದ ದುಃಖದಲ್ಲಿ ಮುಳುಗಿದ ಹುಡುಗಿ ಇಲಿ ವಿಷ ಕುಡಿದಿದ್ದಾಳೆ.

ಮೂರನೇ ಘಟನೆಯಲ್ಲಿ ನದಿಗೆ ಹಾರಿದ ಬಾಲಕಿ ಸಾವನ್ನಪ್ಪಿದ್ದಾಳೆ. ಅವಳಿಗೂ ಒಬ್ಬ ಹುಡುಗನ ಜೊತೆ ಪ್ರೀತಿ ಇತ್ತು. ಆಕೆಯ ಸಂಬಂಧಿ ಸಂಜಯ್ ತಿವಾರಿ ಆಕೆಯ ಪ್ರೇಮ ಪ್ರಕರಣದ ಬಗ್ಗೆ ಪೋಷಕರಿಗೆ ತಿಳಿಸಿದ್ದರು. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಂಬಲಾಗಿದೆ. ಆದರೆ, ಈ ಪ್ರಕರಣದಲ್ಲಿ ಸಂಜಯ್ ತಿವಾರಿ ಭಾಗಿಯಾಗಿದ್ದಾರೆ ಎಂದು ಮೃತ ಹುಡುಗಿಯ ಸಹೋದರಿ ಆರೋಪಿಸಿದ್ದಾರೆ. ನಾವು ವಿಷಯವನ್ನು ತನಿಖೆ ಮಾಡುತ್ತಿದ್ದೇವೆ.

ನಾಲ್ಕನೇ ಪ್ರಕರಣದಲ್ಲಿ, ತನ್ನ ಸ್ನೇಹಿತರು ಮಾಡಿದ ಕೆಲವು ಕಾಮೆಂಟ್‌ಗಳಿಂದ ಹುಡುಗಿ ತನ್ನ ಮಣಿಕಟ್ಟನ್ನು ಸೀಳಿಸಿಕೊಂಡಿದ್ದಾಳೆ. ಆಕೆಗೆ ಕೌನ್ಸೆಲಿಂಗ್ ಮಾಡಲಾಗಿದ್ದು, ಈಗ ಆರೋಗ್ಯವಾಗಿದ್ದಾಳೆ ಎಂದು ಸೀತಾಪುರದ ಎಎಸ್​​ಪಿ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!