ವಿವೇಕ ವಾರ್ತೆ : ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಯಾರೇ ಆಗಲಿ ಇಂತಹ ಕೃತ್ಯ ಎಸಗಿದರೆ ಅಂಥವರನ್ನು ತಕ್ಷಣ ಬಂಧಿಸಬಹುದು. ಈ ಅರಿವು ಇದ್ದರೂ ಸಹ ಆಗಾಗ ಇಂತಹ ಕೃತ್ಯಗಳನ್ನು ಎಸೆಯುತ್ತಿರುವುದು ವಿಪರ್ಯಾಸ.
ಯುವತಿಯೋರ್ವಳು ರಸ್ತೆಯ ಮಧ್ಯೆಯೇ ಕಾರು ನಿಲ್ಲಿಸಿ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕೈ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಈ ಕುರಿತು ವಿಡಿಯೋ ವೈರಲ್ ಆಗಿದೆ. ಹಳದಿ ಟೀ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಧರಿಸಿರುವ ಯುವತಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕೈ ಮಾಡಿದ್ದಾಳೆ. ಅಲ್ಲದೇ ಅಶ್ಲೀಲ ಪದಗಳಿಂದ ನಿಂದಿಸಿ ಮತ್ತೆ ಕಾರು ಏರಿ ಅಲ್ಲಿಂದ ಹೊರಟ್ಟಿದ್ದಾರೆ.
ಈ ದೃಶ್ಯವನ್ನು ದಾರಿಹೋಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಯುವತಿಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
https://twitter.com/gharkekalesh/status/1688900828269363200?ref_src=twsrc%5Etfw%7Ctwcamp%5Etweetembed%7Ctwterm%5E1688900828269363200%7Ctwgr%5E5364e622e33a443d5c78b79f48bdefab6f213a89%7Ctwcon%5Es1_c10&ref_url=https%3A%2F%2Fapi-news.dailyhunt.in%2F