ವಿವೇಕ ವಾರ್ತೆ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಇತ್ತೀಚೆಗೆ ಖಾಸಗಿ ಶಾಲಾ ವಿದ್ಯಾರ್ಥಿ ಶ್ರೀನಿವಾಸ್ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
9ನೇ ತರಗತಿ ವಿದ್ಯಾರ್ಥಿ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಕಡೂರು ತಾಲೂಕಿನ ಹಿರೇ ಬಳ್ಳೇಕೆರೆ ಗ್ರಾಮದ ವಿದ್ಯಾರ್ಥಿ.
ಹಾಸ್ಟೆಲ್ ಸಿಬ್ಬಂದಿ ಕೇವಲ 750 ರೂ ಸಾಲ ಕೊಟ್ಟು, ಆ ಬಾಲಕನಿಂದ 3 ಸಾವಿರ ಹಣ ಕೇಳಿದ್ದಾರೆ ಎಂಬ ಆರೋಪವಿದೆ.
ಈಗ ವಿದ್ಯಾರ್ಥಿ ಬರೆದಿಟ್ಟ ಡೆತ್ ನೋಟ್ ವೈರಲ್ ಆಗುತ್ತಿದ್ದು, ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಬಗ್ಗೆ ವಿದ್ಯಾರ್ಥಿ ಬರೆದಿದ್ದಾನೆ.
ಇದನ್ನು ಆಧರಿಸಿ ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಮೃತ ಬಾಲಕನ ತಂದೆ-ತಾಯಿ ಕಣ್ಣೀರು ಹಾಕುತ್ತಿದ್ದಾರೆ.