WhatsApp Group
Join Now
Telegram Group
Join Now
Instagram Account
Follow Now
Facebook Page
Follow Now
ವಿಜಯಪುರ: ಪೊಲೀಸರ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಮೌನೇಶ್ ಅಬ್ಬಿಹಾಳ (30) ಮೃತ ಯುವಕ ನೇಣಿಗೆ ಶರಣಾಗಿದ್ದಾನೆ.
ಕಳೆದ ಕೆಲ ದಿನಗಳ ಹಿಂದೆ ಮೌನೇಶ ಸೋದರ ಮಾವ ಬಸವರಾಜ್ ಕಾಣೆಯಾಗಿದ್ದರು. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆ ಮೌನೇಶನನ್ನು ಪೊಲೀಸರು ಕರೆದು ವಿಚಾರಣೆ ನಡೆಸಿ ಕಳುಹಿಸಿದ್ದರು. ಮತ್ತೆ ನಿನ್ನೆಯೂ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದರು. ಇದೀಗ ಪೊಲೀಸರ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now