ನಟ ದರ್ಶನ ಎಸ್ಕೇಪ್..?‌ ಸುಪ್ರೀಂ ಕೋರ್ಟ್​ ತೀರ್ಪು ಬೆನ್ನಲ್ಲೇ ನಟ ಹೋಗಿದ್ದು ಎಲ್ಲಿಗೆ?

WhatsApp Group Join Now
Telegram Group Join Now
Instagram Account Follow Now

ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ (actor darshan) ಹಾಗೂ ಪವಿತ್ರಾ ಗೌಡ (pavitra Gowda) ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಆದರೆ ದರ್ಶನ್ (darshan) ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.

ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ​ ಮಹತ್ವದ ತೀರ್ಪು ನೀಡಿದ್ದು ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಬೇಲ್ ರದ್ದು ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಆದರೆ ದರ್ಶನ್ ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಂತೆ.

ನಟ ದರ್ಶನ್​ ನಿನ್ನೆ ರಾತ್ರಿವರೆಗೂ ಪತ್ನಿ ವಿಜಯಲಕ್ಷ್ಮಿ (vijayalaxmi Darshan) ಅವರ ಜೊತೆ ಬೆಂಗಳೂರಿನಲ್ಲೇ (Bangaluru) ಇದ್ದರು. ಆದರೆ ನಂತರ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿಯೇ ದರ್ಶನ್​ ಬೆಂಗಳೂರು ಬಿಟ್ಟು ಹೊರಗೆ ಹೋಗಿದ್ದಾರೆ ಅನ್ನೋ ಮಾಹಿತಿ ಇದೆ. ದರ್ಶನ್ ಅವರ ಆಪ್ತ ಬಳಗದಿಂದ ಈ ಮಾಹಿತಿ ಲಭ್ಯವಾಗಿದೆ.

ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು..! ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನರ​ ಜಾಮೀನು ರದ್ದು..!

ಸುಪ್ರೀಂ ಕೋರ್ಟ್​ ತೀರ್ಪು ಹಿನ್ನೆಲೆಯಲ್ಲಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಮನೆಯಲ್ಲಿ ಇದ್ದಾರೆ. ನಗರದ ಹೊಸಕೆರೆಹಳ್ಳಿಯಲ್ಲಿ ಇರುವ ಪ್ರೆಸ್ಟೀಜ್ ಸೌತ್ ರಿಡ್ಜ್ ( prestige south ridge)  ಅಪಾರ್ಟ್​​ಮೆಂಟ್​ನಲ್ಲಿ ವಿಜಯಲಕ್ಷ್ಮಿ ಅವರು ಇದ್ದಾರೆ. ಸುಪ್ರಿಂ ಕೋರ್ಟ್ (Supreme Court) ತೀರ್ಪು ಇರುವುದರಿಂದ ಬೆಳಗ್ಗೆಯಿಂದಲೂ ಮನೆಯಿಂದ ಹೊರಬಂದಿಲ್ಲ. ಇದೀಗ ಸುಪ್ರೀಂ ಕೋರ್ಟ್​ ತೀರ್ಪು ಹೊರ ಬಿದ್ದಿದ್ದರಿಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಟೆನ್ಷನ್ ಶುರುವಾಗಿದೆ.

ಹೈಕೋರ್ಟ್​ ಜಾಮೀನು ನೀಡಿರುವುದನ್ನು ಪ್ರಶ್ನೆ ಮಾಡಿ ರಾಜ್ಯ ಸರ್ಕಾರ (Karnataka Government) ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್​ ಆದೇಶವನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪು ಪ್ರಕಟಿಸಿದ್ದು ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಬೇಲ್ ಅನ್ನು ಸುಪ್ರೀಂ ಕೋರ್ಟ್ ಕ್ಯಾನ್ಸಲ್ ಮಾಡಿದೆ.

ದರ್ಶನ
Pavitra Gowda

ರೇಣುಕಾಸ್ವಾಮಿ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ (Pavitra Gowda Arrested ). ಸುಪ್ರೀಂ ಕೋರ್ಟ್​ ಜಾಮೀನು ರದ್ದು ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಪೊಲೀಸರು ಪವಿತ್ರಾ ಗೌಡರನ್ನು ಬಂಧಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನು ಅನ್ನು ಸುಪ್ರೀಂ ಕೋರ್ಟ್​ ರದ್ದು ಮಾಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಆರ್. ಮಹಾದೇವನ್ ಪೀಠ ಈ ಮಹತ್ವದ ಆದೇಶ ನೀಡಿದ್ದಾರೆ. ಅಲ್ಲದೇ ಈ ಕೂಡಲೇ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳು ಜೈಲಿಗೆ ಹೋಗಬೇಕಿದೆ.

ಕರ್ನಾಟಕದ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದರು. ಈ ಬಗ್ಗೆ ವಿಚಾರಣೆ ಮಾಡಿದ್ದ ಸುಪ್ರೀಂ, ಕರ್ನಾಟಕ ಹೈಕೋರ್ಟ್​ನ ತೀರ್ಪಿನಲ್ಲಿ ದೋಷವಿದೆ ಎಂದು ಹೇಳಿದೆ. ಜೈಲಿನಲ್ಲಿ ರಾಜಾರೋಷವಾಗಿ ಸಿಗರೇಟ್ ಸೇದಿದ್ದನ್ನ ತಿಳಿಸಲಾಗಿತ್ತು. ಇದಕ್ಕೆ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇನ್ನೊಮ್ಮೆ ಇದೇ ರೀತಿ ಆದರೆ ಗೃಹ ಇಲಾಖೆಯನ್ನು ಇಲ್ಲಿಗೆ ಕರೆಸಬೇಕಾಗುತ್ತದೆ ಎಂದು ಸುಪ್ರೀಂ ಹೇಳಿದೆ.

ಇದರ ಜೊತೆಗೆ ಹೈಕೋರ್ಟ್ ನೀಡಿರುವ ಜಾಮೀನು ಅನ್ನು ರದ್ದುಗೊಳಿಸಲಾಗಿದ್ದು ತಕ್ಷಣದಿಂದಲೇ ದರ್ಶನ್ ಹಾಗೂ ಪವಿತ್ರಾ ಗೌಡರನ್ನು ಜೈಲಿಗೆ ಹಾಕಬೇಕು ಎಂದು ಕೋರ್ಟ್ ಹೇಳಿದೆ. ಇನ್ನು ಸುಪ್ರೀಂಕೋರ್ಟ್​ನ ತೀರ್ಪಿನ ಆದೇಶದ ಪ್ರತಿ ಸಿಕ್ಕ ಬಳಿಕ ಅಧಿಕಾರಿಗಳು ಮುಂದಿನ ಕ್ರಮ ತೆಗೆದುಕೊಳ್ಳಲ್ಲಿದ್ದಾರೆ. ಹೀಗಾಗಿ ಆರೋಪಿಗಳನ್ನು ಅರೆಸ್ಟ್ ಮಾಡಲು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now
Instagram Account Follow Now

Vivek Kudarimath, Chief Editor Vivekvarthe, Journalist, Video Editor, Content Writer, CEO Of VPG Digital Private Limited

Leave a Comment