ವಿವೇಕವಾರ್ತೆ: ಪೊಲೀಸ್ ಕಾನ್‌ಸ್ಟೇಬಲ್ (Police Constable) ಒಬ್ಬರು ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬಳ್ಳಾರಿಯ (Bellary) ಡಿಎಆರ್ ಪೊಲೀಸ್ ಹೆಡ್‌ಕ್ವಾಟ್ರಸ್‌ನಲ್ಲಿ ನಡೆದಿದೆ.
ವಿಜಯನಗರದ ಹಗರಿಬೊಮ್ಮನಹಳ್ಳಿ ತಾಲೂಕು ಆನೆಕಲ್ ತಾಂಡ ನಿವಾಸಿ ಪ್ರಕಾಶ್ ನಾಯ್ಕ್ (25) ಆತ್ಮಹತ್ಯೆ ಮಾಡಿಕೊಂಡಿರುವ ಪೇದೆ. ಟ್ರೈನಿಂಗ್‌ಗೆ ಹೆದರಿ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ.
ಪ್ರಕಾಶ್ ನಾಯ್ಕ್‌ಗೆ ಆಂತರಿಕ ಭದ್ರತೆ (D- SWAT) ಟ್ರೈನಿಂಗ್‌ಗಾಗಿ ಬೆಂಗಳೂರಿಗೆ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದರು. ಇದಾದ ಬಳಿಕ ಪ್ರಕಾಶ್ ನಾಯ್ಕ್ ಕ್ವಾಟ್ರಸ್ ರೂಂನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕಾಶ್ ಟ್ರೈನಿಂಗ್‌ಗೆ ಹೆದರಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
Related Content
ಪ್ರಕಾಶ್ ನಾಯ್ಕ್ 2021ನೇ ಬ್ಯಾಚ್‌ನಲ್ಲಿ ಡಿಎಆರ್ ಪೊಲೀಸ್ ಆಗಿ ನೇಮಕ ಆಗಿದ್ದರು. ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೇಲಾಧಿಕಾರಿಗಳ ಕಿರುಕುಳವೇ ಕಾರಣ?
ಪ್ರಕಾಶ್ ನಾಯ್ಕ್ ಆತ್ಮಹತ್ಯೆಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂಬ ಅನುಮಾನ ಇದೀಗ ಮೂಡಿದೆ. ಎಂಜಿನಿಯರಿಂಗ್ ಮಾಡಿ ಪೊಲೀಸ್ ಆಗಬೇಕು ಎಂದು ಬಂದಿದ್ದ ಯುವಕನ ದುರಂತ ಅಂತ್ಯವಾಗಿದೆ. ಆತ್ಮಹತ್ಯೆಗೂ ಮುನ್ನ ರಾತ್ರಿ 12 ಗಂಟೆಯವರೆಗೂ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಪ್ರಕಾಶ್ ಪೋಷಕರ ಮುಂದೆ ಅಳಲು ತೋಡಿಕೊಂಡಿದ್ದ ಎನ್ನಲಾಗಿದೆ.
ಮೇಲಾಧಿಕಾರಿಗಳಾದ ತಿಪ್ಪೇಸ್ವಾಮಿ DYSP, ಅಮೋಘ RPI, ದೀವಾಕರ್ RSI, ಖಾದರ್ ಬಾಷಾ AHC ಅವರಿಂದ ಕಿರುಕುಳವಾಗ್ತಿದೆ. ರಜೆ ಪಡೆಯಲು ಅಧಿಕಾರಿಗಳಿಗೆ ದುಡ್ಡು ಕೊಡಬೇಕು. ಅನಾರೋಗ್ಯದ ಹಿನ್ನೆಲೆ ಸಿಸಿಟಿ ಟ್ರೈನಿಂಗ್ ಬೇಡ ಎಂದಿದ್ದು, ಟ್ರೈನಿಂಗ್ ಕ್ಯಾನ್ಸಲ್ ಮಾಡಿಕೊಂಡು ಹಣ ಕೊಟ್ಟಿದ್ದನೆಂದು ಪ್ರಕಾಶ್ ತಿಳಿಸಿರುವುದಾಗಿ ಆತನ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.