spot_img
spot_img
spot_img
spot_img
spot_img
spot_img

ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಆತ್ಮಹತ್ಯೆಗೆ ಶರಣಾದ ಯೋಧ..!

Published on

spot_img

ವಿವೇಕವಾರ್ತೆ: ಅಸ್ಸಾಂ ರೈಫಲ್ಸ್‌ನ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಮಣಿಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಚುರಾಚಂದ್‍ಪುರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಆರ್ ಬೆಟಾಲಿಯನ್ ಆವರಣದಲ್ಲಿ ಈ ಘಟನೆ ನಡೆದಿದೆ. ಗುಂಡು ಹಾರಿಸಿದ್ದು ಕಲಹ ಪೀಡಿತ ಮಣಿಪುರದ ಚುರಾಚಂದ್‍ಪುರ ಮೂಲದ ಯೋಧ ಎಂದು ತಿಳಿದುಬಂದಿದೆ. ಗುಂಡಿನ ದಾಳಿಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 

ಈ ಬಗ್ಗೆ ಸೇನೆಯ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಇದೊಂದು ದುರದೃಷ್ಟಕರ ಘಟನೆಯಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಸಂಘರ್ಷದ ವಿಚಾರವಾಗಿ ಯೋಧರು ಯಾವುದೇ ಸಂಬಂಧವನ್ನು ಹೊಂದಿರಬಾರದು. ಎಲ್ಲಾ ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಮಣಿಪುರದ ವಿವಿಧ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಮಣಿಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಸಿಬ್ಬಂದಿ ಒಟ್ಟಿಗೆ ಉಳಿದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದಿದ್ದಾರೆ.

ಮಣಿಪುರದಲ್ಲಿ ಕಳೆದ ಮೇ ತಿಂಗಳಿನಿಂದ ಮೇಥಿ ಮತ್ತು ಕುಕಿ-ಜೋ ಸಮುದಾಯಗಳ ನಡುವೆ ಜನಾಂಗೀಯ ಹಿಂಸಾಚಾರ (Manipur violence) ನಡೆಯುತ್ತಿದೆ. ಹಿಂಸಾಚಾರದಲ್ಲಿ ಕನಿಷ್ಠ 207 ಇಲ್ಲಿಯವರೆಗೆ ಸಾವಿಗೀಡಾಗಿದ್ದಾರೆ. ಅಲ್ಲದೇ ಸುಮಾರು 50,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!