ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಅಮಾನತು ನಿರ್ಧಾರ ಮರುಪರಿಶೀಲನೆ ಮಾಡಬೇಕು ಅಂತಾ ಪಾಕಿಸ್ತಾನ, ಭಾರತಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿತ್ತು. ಇದೀಗ ಭಾರತ ಸರ್ಕಾರ ತನ್ನ ನಿರ್ಧಾರ ಏನು ಅನ್ನೋದನ್ನ ತಿಳಿಸಿದೆ.
ಈ ಬಗ್ಗೆ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿರುವ ವಿದೇಶಾಂಗ ಇಲಾಖೆ ಸಚಿವ ಎಸ್.ಜೈಶಂಕರ್.. ಪಾಕಿಸ್ತಾನ, ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಇಂಡಸ್ ನದಿ ನೀರಿನ ಬಗ್ಗೆ ಮಾತುಕತೆ ಇಲ್ಲ. ಪಾಕಿಸ್ತಾನವು ಮೊದಲು ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದಿದ್ದಾರೆ. ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಸರ್ಕಾರ, ಇಂಡಸ್ ನದಿ ನೀರು ಹಂಚಿಕೆ ಒಪ್ಪಂದವನ್ನು ಅಮಾನತಿನಲ್ಲಿ ಇಟ್ಟಿದೆ. ಪಾಕಿಸ್ತಾನದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಟೆರರಿಸ್ಟ್ ಗಳಿದ್ದಾರೆ. ಪಾಕಿಸ್ತಾನ ಟೆರರ್ ಟ್ರೈನಿಂಗ್ ಕ್ಯಾಂಪ್ಗಳನ್ನು ಮುಚ್ಚಬೇಕು ಎಂದು ಆಗ್ರಹಿಸಿದ್ದಾರೆ.
ಗೋಡೆ ಕೊರೆದು,ಬೆತ್ತಲೆಯಾಗಿ ಕಳ್ಳತನ ಮಾಡಿದ ಖತರ್ನಾಕ್ ಕಳ್ಳ..! CCTVಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ
ಇದೇ ವೇಳೆ ಜೈ ಶಂಕರ್, ಚೀನಾದ ಮುಖವಾಡವನ್ನೂ ಕಳಚಿಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಬಿಕ್ಕಟ್ಟಿನ ವೇಳೆ, ಚೀನಾದ ಸ್ಯಾಟಲೈಟ್ಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿವೆ ಎಂದಿದ್ದಾರೆ. ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ ನಡೆಸಿತ್ತು. 9 ಉಗ್ರರ ನೆಲೆಗಳ ಮೇಲೆ ಭಾರತ ಅಟ್ಯಾಕ್ ಮಾಡಿ ಧ್ವಂಸ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ, ಭಾರತೀಯ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಶುರುಮಾಡಿತು.
IPL 2025 ದ್ವಿತಿಯಾರ್ಧಕ್ಕೆ ಕೌಂಟ್ ಡೌನ್: ನಿಯಮ ಬದಲಿಸಿದ BCCI! ಏನದು??
ಇದರಿಂದ ಭಾರತ ಅನಿವಾರ್ಯವಾಗಿ ಸ್ವಯಂ ರಕ್ಷಣೆಗಾಗಿ ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ದಾಳಿ ಮಾಡಬೇಕಾಯಿತು. ಇದರಿಂದ ಎರಡು ದೇಶಗಳ ಮಧ್ಯೆ ಯುದ್ಧದ ಆತಂಕ ಉಂಟಾಗಿತ್ತು. ಈ ವೇಳೆ ಚೀನಾದ ಸ್ಯಾಟಲೈಟ್ಗಳು ಪಾಕಿಸ್ತಾನಕ್ಕೆ ಸಹಾಯ ಮಾಡಿವೆ.