spot_img
spot_img
spot_img
spot_img
spot_img
spot_img

ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Published on

spot_img

ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವಕನ ವಯಸ್ಸಿನ (Age) ಅಂತರ ಹೆಚ್ಚಾದ ಹಿನ್ನೆಲೆ ನಿಶ್ಚಿತಾರ್ಥ (Engagement)  ಆಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ರಾಮನಗರದಲ್ಲಿ ನಡೆದಿದೆ.

ಬಿ.ಬಿ.ಮುಸ್ಕಾನ್ (20) ಮೃತ ಯುವತಿ. ಮುಸ್ಕಾನ್ ಪ್ಯಾರ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಇದೇ ವೇಳೆ ಆಕೆಗೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನಿಗೆ ಮತ್ತು ಆಕೆಗೆ ವಯಸ್ಸಿನ ಅಂತರ ಹೆಚ್ಚಾದ ಹಿನ್ನೆಲೆ ಈ ಮದುವೆಗೆ ನಿರಾಕರಿಸಿದ್ದಳು. ಆದರೆ ಕುಟುಂಬಸ್ಥರ ಒತ್ತಾಯದಿಂದ ಈ ಮದುವೆಗೆ ಒಪ್ಪಿಕೊಂಡಿದ್ದಳು. ಮನೆಯವರ ಬಲವಂತಕ್ಕೆ ಮದುವೆಗೆ ಒಪ್ಪಿಕೊಂಡಿದ್ದವಳು ಈಗ ನೇಣಿಗೆ ಶರಣಾಗಿದ್ದಾಳೆ.

ನಡೆದಿದ್ದೇನು?
ಜ.24 ರಂದು ರಾತ್ರಿ ಉಟ ಮುಗಿಸಿಕೊಂಡು ನಿದ್ರೆ ಮಾಡಲೆಂದು ಮುಸ್ಕಾನ್ ಕೊಠಡಿಗೆ ತೆರಳಿದ್ದಳು. ಮಲಗಲು ಹೋದ ಯುವತಿ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

 

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!