ಬೆಳಗಾವಿ: ಬಸ್‌ ಇಲ್ಲದೆ ನಡೆದೇ ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಒಬ್ಬಳ ಸಾವು

Published on

spot_img
spot_img

ಬೆಳಗಾವಿ : ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ಬಸ್ ಇಲ್ಲದಿದ್ದಕ್ಕೆ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು (Road Accident) ಡಿಕ್ಕಿಯಾಗಿದ್ದು, ಒಬ್ಬಳು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಈ ಭಾಗದಲ್ಲಿ ಸಮರ್ಪಕವಾಗಿ ಬಸ್‌ ಸೇವೆ ಇರಲಿಲ್ಲ. ಹೀಗಾಗಿ ಶನಿವಾರ (ಡಿ.೩೧) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಭಾನುವಾರ (ಜ.೧) ಸಹ ಬಸ್ ವ್ಯವಸ್ಥೆ ಇಲ್ಲದೇ ಇದ್ದಿದ್ದಕ್ಕೆ ವಿದ್ಯಾರ್ಥಿನಿಯರು ಶಾಲೆಗೆ ನಡೆದೇ ಹೊರಟಿದ್ದರು.

ಮೃತ ಅಕ್ಕವ್ವ ೧5 ದಿನಗಳ ಹಿಂದೆಯೇ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಮನವಿ ಸಲ್ಲಿಸಿ, ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಕೋರಿದ್ದಳು. ಆದರೂ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!