spot_img
spot_img
spot_img
spot_img
spot_img
spot_img

Accident: ಟ್ರ್ಯಾಕ್ಟರ್‌ʼಗೆ ಓಮಿನಿ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

Published on

spot_img

ವಿವೇಕವಾರ್ತೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ‌ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳದಲ್ಲೇ ‌ಮೂವರು ಸಾವನ್ನಪ್ಪಿದ್ದು. ಗಾಯಾಳುಗಳಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚನ್ನಗಿರಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!