spot_img
spot_img
spot_img
spot_img
spot_img
spot_img

ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿ 31 ವರ್ಷಗಳ ಬಳಿಕ ಅರೆಸ್ಟ್

Published on

spot_img

ವಿವೇಕವಾರ್ತೆ: ಕೊಲೆ ಪ್ರಕರಣವೊಂದರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು 31 ವರ್ಷಗಳ ನಂತರ ಮಹಾರಾಷ್ಟ್ರ (Maharashtra) ಪೊಲೀಸರು (Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದೀಪಕ್ ಭಿಸೆ (62) ಎಂದು ಗುರುತಿಸಲಾಗಿದೆ. ಪೊಲೀಸರು ಸುಮಾರು 31 ವರ್ಷಗಳಿಂದಲೂ ನಿರಂತರವಾಗಿ ಆತನಿಗಾಗಿ ಹುಡುಕಾಟ ನಡೆಸಿದ್ದರು. ಆರೋಪಿ ಬಗ್ಗೆ ವಿಚಾರಿಸಲು ಆತನ ಊರಿಗೆ ತೆರಳಿದಾಗ ಆತ ಮೃತಪಟ್ಟಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದರು. ಈಗ ದೀಪಕ್ ಪಾಲ್ಘರ್ ಜಿಲ್ಲೆಯ ನಲಸೋಪಾರಾ ಎಂಬಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಾಗಿ ಹುಟುಕಾಟ ನಡೆಸಿದ್ದ ಪೊಲೀಸರಿಗೆ ಮೊದಲು ಆತನ ಪತ್ನಿಯ ಮೊಬೈಲ್ ನಂಬರ್ ಸಿಕ್ಕಿದೆ. ಇದರಿಂದ ಆರೋಪಿಯ ಸುಳಿವು ಸಿಕ್ಕಿದೆ. ಆರೋಪಿ 1989 ರಲ್ಲಿ ರಾಜುಚಿಕ್ಕ ಎಂಬಾತನನ್ನು ಕೊಲೆಗೈದು ಧಮೇರ್ಂದ್ರ ಸರೋಜ್ ಎಂಬವರ ಕೊಲೆಗು ಸಹ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಕೊಲೆ ಪ್ರಕರಣದಲ್ಲಿ ಆರೋಪಿ ದೀಪಕ್‍ನನ್ನು ಹಿಂದೆ ಬಂಧಿಸಲಾಗಿತ್ತು. ಆತ 1992 ರಲ್ಲಿ ಜಾಮೀನು ಪಡೆದ ಬಳಿಕ ವಿಚಾರಣೆಗೆ ಹಾಜರಾಗಿರಲಿಲ್ಲ. 2003 ರಲ್ಲಿ ನ್ಯಾಯಾಲಯ (Court) ಆತ ತಲೆಮರೆಸಿಕೊಂಡಿದ್ದಾನೆ ಎಂದು ಘೋಷಿಸಿತ್ತು.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!