spot_img
spot_img
spot_img
spot_img
spot_img
spot_img

ತಾಳಿ ಕಟ್ಟಿದ ಬಳಿಕ ಅನಾರೋಗ್ಯ ಕಾರಣ ಮುಂದಿಟ್ಟು ವರ ಎಸ್ಕೇಪ್..! ಮುಂದೇನಾಯ್ತು..?

Published on

spot_img

ಮಂಗಳೂರು: ತಾಳಿ ಕಟ್ಟಿದ ಬಳಿಕ ವರನೊಬ್ಬ ಅನಾರೋಗ್ಯ ಕಾರಣ ಕೊಟ್ಟು ಎಸ್ಕೇಪ್ ಆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯಬೇಕಿತ್ತು. ಅಂತೆಯೇ ಯುವತಿ ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ ಗೆ ಬಂದಿದ್ದಾರೆ. ಆದರೆ ವರ ತಾಳಿ ಕಟ್ಟಿದ ಬಳಿಕ ಭಾರೀ ಹೈಡ್ರಾಮಾ ನಡೆಸಿದ್ದಾನೆ.

ನಡೆದಿದ್ದೇನು..?: ಕಲ್ಯಾಣ ಮಂಟಪದಲ್ಲಿ ಅಕ್ಷಯ್ ಮಂಗಳೂರು ಮೂಲದ ಯುವತಿ ಜೊತೆ ಮದುವೆಯಾಗುತ್ತಿರುವ ವಿಚಾರ ಮಾಜಿ ಪ್ರೇಯಸಿ ಗಮನಕ್ಕೆ ಬಂದಿದೆ. ಹೀಗಾಗಿ ಮಾಜಿ ಪ್ರೇಯಸಿ ಕಲ್ಯಾಣಮಂಟಪಕ್ಕೆ ಬಂದು ಕ್ಯಾತೆ ತೆಗೆದಿದ್ದಾಳೆ. ಈ ಹಿನ್ನೆಲೆಯಲ್ಲಿ ವರ, ಅನಾರೋಗ್ಯ ಕಾರಣ ಮುಂದಿಟ್ಟಿದ್ದಾನೆ. ಮದುವೆಗೆ ಬಂದಿದ್ದ ಸಂಬಂಧಿಕರಿಗೆ ಕಿಡ್ನಿಯಲ್ಲಿ ಕಲ್ಲುಂಟಾಗಿ ಆಸ್ಪತ್ರೆಗೆ ದಾಖಲು ಆಗುತ್ತೇವೆ ಅಂತ ಹೇಳಿದ್ದಾನೆ. ಅಲ್ಲದೇ ಸಂಬಂಧಿಕರೇ ವರನನ್ನು ಕಲ್ಯಾಣ ಮಂಟಪದಿಂದ ಕರೆದುಕೊಂಡು ಹೋಗಿದ್ದಾರೆ.

ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಗೆ ಶಾದಿ ಡಾಟ್ ಕಾಮ್ ಮೂಲಕ ಅಕ್ಷಯ್ ಪರಿಚಯವಾಗಿದೆ. ಈ ಪರಿಚಯವು ಪ್ರೀತಿಗೆ ತಿರುಗಿ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಯುವತಿಯು ಕೇರಳದ ಪೊಲೀಸ್ ಠಾಣೆಯಲ್ಲಿ ಡಿ.26ಕ್ಕೆ ಅತ್ಯಾಚಾರ ದೂರು ದಾಖಲಿಸಿದ್ದರು. ಆರೋಪಿ ಅಕ್ಷಯ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್ ಗೆ ವಿವಾಹ ನಿಶ್ಚಯವಾಗಿದೆ. ವಿಷಯ ತಿಳಿದು ಆಗಮಿಸಿದ ಮಾಜಿ ಪ್ರಿಯತಮೆ ಹಾಲ್ ಮುಂಭಾಗ ಹೈಡ್ರಾಮ ಮಾಡಿದ್ದಾಳೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!