spot_img
spot_img
spot_img
spot_img
spot_img
spot_img

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ ಮುಖ್ಯ ಶಿಕ್ಷಕಿ

Published on

spot_img

ವಿವೇಕವಾರ್ತೆ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಜೋಹರ ಜಬೀನ ಎಂಬುವವರು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು ಹಾಗೂ ತಮ್ಮ ಮನೆಯ ಕೆಲಸಕ್ಕೂ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ಯಾವುದಕ್ಕೂ ಡೋಂಟ್ ಕೇರ್ ಎಂಬಂತೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರ್ಥಿಗಳನ್ನು ಶೌಚಾಲಯ ಕ್ಲಿನಿಂಗ್ ಮಾಡಲು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಮನೆಯ ಕೆಲಸಕ್ಕೂ ಶಾಲಾ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ರೋಜಾ ಪೊಲೀಸ್ ಠಾಣೆಯಲ್ಲಿ ಮುಖ್ಯ ಶಿಕ್ಷಕಿ ಜೋಹರಾ ವಿರುದ್ಧ ದೂರು ದಾಖಲಾಗಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!