spot_img
spot_img
spot_img
spot_img
spot_img
spot_img

ನೀವೂ ಹೊಸ ಸಿಮ್‌ ಕಾರ್ಡ್‌ ತೆಗೆದುಕೊಳ್ಳುವ ಯೋಚನೆಯಲ್ಲಿದ್ದೀರಾ: ಮೊದಲು ನಿಯಮ ತಿಳಿದುಕೊಳ್ಳಿ!

Published on

spot_img

ನೀವು ಹೊಸ ಸಿಮ್‌ ಕಾರ್ಡ್‌ (Sim Card) ಖರೀದಿ ಮಾಡುತ್ತೀರಾ? ಹಾಗಾದ್ರೆ  ಇನ್ಮುಂದೆ ಕೆಲ ಕಠಿಣ ನಿಯಮಗಳನ್ನು ಪಾಲಿಸಬೇಕು. ಗ್ರಾಹಕರು ಮಾತ್ರವಲ್ಲ ಸಿಮ್‌ ವಿತರಿಸುವ ಡೀಲರ್‌ಗಳು ಸಹ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದಲ್ಲಿ ಜೈಲು (Jail) ಶಿಕ್ಷೆಯನ್ನು ವಿಧಿಸಲಾಗುತ್ತದೆ.

ಬಹುತೇಕ ಸೈಬರ್ ಅಪರಾಧಗಳು ಮತ್ತು ದೇಶವಿರೋಧಿ ಕೃತ್ಯಗಳನ್ನು ಸುಳ್ಳು ದಾಖಲೆಗಳೊಂದಿಗೆ ಜೋಡಿಸಲಾದ ಮೊಬೈಲ್ ಸಂಖ್ಯೆಗಳನ್ನು (Mobile Sim) ಬಳಸುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮ ಕೈಗೊಂಡಿದೆ.

ಹೊಸ ನಿಯಮಗಳು ಏನು?
ವ್ಯಾಪಾರಸ್ಥರು/ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್‌ಗಳನ್ನು ಮಾತ್ರ ಪಡೆಯಬಹುದು

ಸಿಮ್‌ ಕಾರ್ಡ್‌ ರದ್ದು/ ನಿಷ್ಕ್ರಿಯಗೊಳಿಸಿದ 90 ದಿನಗಳ ನಂತರ ಆ ಸಂಖ್ಯೆಯನ್ನು ಬೇರೆ ಗ್ರಾಹಕರಿಗೆ ನೀಡಲಾಗುತ್ತದೆ.

ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ (Aadhar Card) ಮತ್ತು ಜನಸಂಖ್ಯಾ ಡೇಟಾವನ್ನು (Demographic Data Collection) ಸಲ್ಲಿಸಬೇಕಾಗುತ್ತದೆ.

ನೋಂದಾಯಿಸದ ಡೀಲರ್‌ಗಳ ಮೂಲಕ ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಿದರೆ ಹೊಸ ನಿಯಮಗಳ ಪ್ರಕಾರ ಟೆಲಿಕಾಂ ಆಪರೇಟರ್‌ಗಳಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!