spot_img
spot_img
spot_img
spot_img
spot_img
spot_img

ಕಡೆ ಕ್ಷಣದಲ್ಲಿ 76 ನಿಗಮ-ಮಂಡಳಿಗಳ ಹುದ್ದೆ ಭರ್ತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಅಸ್ತು!

Published on

spot_img

ವಿವೇಕವಾರ್ತೆ : ಕಡೆ ಕ್ಷಣದಲ್ಲಿ ನಡೆದ ಭಾರಿ ಹಗ್ಗ-ಜಗ್ಗಾಟದ ನಡುವೆಯೂ ಕಾಂಗ್ರೆಸ್‌ ಹೈಕಮಾಂಡ್‌ ಒಟ್ಟು 76 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ಮುಖ್ಯಮಂತ್ರಿ ಕಚೇರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಕಚೇರಿಗೆ ರವಾನಿಸಿದೆ. ಹೈಕಮಾಂಡ್ ಅಂತಿಮಗೊಳಿಸಿರುವ ಪಟ್ಟಿಯಲ್ಲಿ ಅಚ್ಚರಿಯೆಂಬಂತೆ ಶಾಸಕರಿಗಿಂತ ಹೆಚ್ಚು ಸ್ಥಾನಗಳು ಕಾರ್ಯಕರ್ತರಿಗೆ ದೊರಕಿದೆ.

ಈ ಪಟ್ಟಿಯಲ್ಲಿ 37 ಶಾಸಕರು ಹಾಗೂ 39 ಕಾರ್ಯಕರ್ತರಿಗೆ ಅವಕಾಶ ದೊರಕಿದೆ.

ಪಟ್ಟಿಯಲ್ಲಿ ಈಗಾಗಲೇ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕವಾಗಿರುವ ಆರ್‌.ವಿ.ದೇಶಪಾಂಡೆ ಅವರ ಹೆಸರೂ ಇದೆ. ಹೀಗಾಗಿ ಪಟ್ಟಿಯಲ್ಲಿ 76 ಹೆಸರು ಇದ್ದರೂ, ಹೊಸದಾಗಿ 75 ಮಂದಿ ಹುದ್ದೆ ಪಡೆಯಲಿದ್ದಾರೆ. ವಾಸ್ತವವಾಗಿ ಬುಧವಾರವೇ ಪಟ್ಟಿಯನ್ನು ಪ್ರಕಟಿಸಲು ಎಲ್ಲ ಸಿದ್ಧತೆ ನಡೆಸಲಾಗಿತ್ತು. ಆದರೆ, ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರ ಹೆಸರನ್ನು ಪಟ್ಟಿಯಲ್ಲಿ ಉಳಿಸುವ ಹಾಗೂ ತೆಗೆಸುವ ಬಗ್ಗೆ ರಾಜ್ಯ ನಾಯಕತ್ವ ಮತ್ತು ಪ್ರಭಾವಿ ಸಚಿವರೊಬ್ಬರ ನಡುವೆ ನಡೆದ ಹಗ್ಗ ಜಗ್ಗಾಟದಿಂದಾಗಿ ಪಟ್ಟಿಯ ಅಧಿಕೃತ ಪ್ರಕಟಣೆ ತುಸು ಮುಂದಕ್ಕೆ ಹೋಗಿದೆ.

ಮೂಲಗಳ ಪ್ರಕಾರ, ಪ್ರಭಾವಿ ಸಚಿವರೊಬ್ಬರ ಕೈಚಳಕದಿಂದ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಸೇರಿದಂತೆ 2-3 ಹೆಸರು ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪಟ್ಟಿಯಿಂದ ಹೊರಬಿದ್ದಿದ್ದು, ಇದಕ್ಕೆ ಕೆಪಿಸಿಸಿ ನಾಯಕತ್ವ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ಪ್ರಕಟವಾಗಬೇಕಿದ್ದ ನಿಗಮ-ಮಂಡಳಿ ಅಧ್ಯಕ್ಷರ ನೇಮಕ ನಿರ್ಧಾರ ತುಸು ನಿಧಾನಗೊಂಡಿದೆ. ಇಡೀ ದಿನ ಈ ಪ್ರಹಸನ ನಡೆದು ಅಂತಿಮವಾಗಿ ಹೈಕಮಾಂಡ್‌ 76 ಮಂದಿಯ ಪಟ್ಟಿಯನ್ನು ಅಂತಿಮಗೊಳಿಸಿದೆ. ಮೂಲಗಳ ಪ್ರಕಾರ ರಾಜ್ಯ ನಾಯಕತ್ವದ ತೀವ್ರ ಪ್ರಯತ್ನದ ನಡುವೆಯೂ ಬಸನಗೌಡ ಬಾದರ್ಲಿ ಅವರಿಗೆ ಪಟ್ಟಿಯಲ್ಲಿ ಅವಕಾಶ ದೊರಕಿಲ್ಲ.

ಸಿದ್ಧತೆ ಮಾಡಿಕೊಳ್ಳುವಂತೆ ಮಾಹಿತಿ ರವಾನೆ: ಹೈಕಮಾಂಡ್‌ನಿಂದ ಪಟ್ಟಿ ದೊರೆಯುತ್ತಿದ್ದಂತೆಯೇ ನಿಗಮ-ಮಂಡಳಿಗೆ ನೇಮಕಗೊಂಡಿರುವವರಿಗೆ ಮಾಹಿತಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!