spot_img
spot_img
spot_img
spot_img
spot_img
spot_img

ರಾಮಮಂದಿರದ ಮಂತ್ರಾಕ್ಷತೆ ಹಂಚಲು ಹೋದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ

Published on

spot_img

 ವಿವೇಕವಾರ್ತೆ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ರಾಮನ ವಿಗ್ರಹ ಪ್ರತಿಷ್ಠಾಪನೆಗೆ (Pran Prathistha Ceremony) ಪೂರ್ವಭಾವಿಯಾಗಿ ಮಂತ್ರಾಕ್ಷತೆ ವಿತರಣೆಗೆ ಸ್ವಯಂಸೇವಕರಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಮುಂಡೂರು (Mundur) ಎಂಬಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ನಡೆದಿದ್ದೇನು..?: ಸಂತೋಷ್‌ ಅವರು ಮುಂಡೂರು ಗ್ರಾಮದಲ್ಲಿ ಮಂತ್ರಾಕ್ಷತೆ ಹಂಚುವ ಜವಾಬ್ದಾರಿ ಹೊತ್ತಿದ್ದರು. ಹೀಗೆ ಮಂತ್ರಾಕ್ಷತೆ ಹಂಚಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಧನಂಜಯ್ ಮತ್ತು ತಂಡ ಕೃತ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ ದುಷ್ಕಮಿಗಳು ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದವರು ಎನ್ನಲಾಗಿದೆ.


ಮಂತ್ರಾಕ್ಷತೆಯನ್ನು ಸಂತೋಷ್ ಮನೆಮನೆಗೆ ಹಂಚುವುದಕ್ಕೆ ಹಲ್ಲೆಗೈದ ತಂಡ ವಿರೋಧ ವ್ಯಕ್ತಪಡಿಸಿತ್ತು. ಆದರೆ ಸಂತೋಷ್ ಮಂತ್ರಾಕ್ಷತೆ ಹಂಚಿದ್ದರು. ಇದೇ ದ್ವೇಷದಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದುಷ್ಕರ್ಮಿಗಳು ಮಗ ಸಂತೋಷ್‌ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಅವರ ತಾಯಿ ತಡೆಯಲು ಬಂದಿದ್ದಾರೆ. ಈ ವೇಳೆ ಸಂತೋಷ್ ತಾಯಿ ಮೇಲೂ ಹಲ್ಲೆಗೈದಿದ್ದಾರೆ. ‌ ಸದ್ಯ ಗಾಯಗೊಂಡ ಸಂತೋಷ್ ಹಾಗೂ ತಾಯಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ (BJP) ಆಗ್ರಹಿಸಿದೆ. ಇತ್ತ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿ, ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದೆ. ಈ ಹಲ್ಲೆ ನಡೆಸಿದವರನ್ನು ತಕ್ಷಣವೇ ಬಂಧಿಸುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!