ಹಮಾಸ್‌ ಉಗ್ರರಿಂದ ಇಸ್ರೇಲ್‌ ಮೇಲೆ ದಾಳಿ : ಬಾಲಿವುಡ್‌ ಖ್ಯಾತ ನಟಿ ನುಶ್ರತ್‌ ಭರುಚ್ಚಾ ನಾಪತ್ತೆ.!

Published on

spot_img
spot_img

ವಿವೇಕವಾರ್ತೆ : ಬಲಿಷ್ಠ ದೇಶವಾದ ಇಸ್ರೇಲ್ ಯಹೂದಿಗಳ ದೇಶವಾಗಿದೆ. ಈ ಬಲಿಷ್ಠ ದೇಶದ ಮೇಲೆ ಪ್ಯಾಲೆಸ್ತೀನ್‌ನ ಹಮಾಸ್‌ ಉಗ್ರರು ದಾಳಿ ನಡೆಸಿದ್ದಾರೆ.

ಇತ್ತ ಇಸ್ರೇಲ್‌ ಕೂಡ ಯುದ್ಧ ಸಾರಿದೆ. ಶನಿವಾರ ಬೆಳಗ್ಗೆ ಪ್ರಾರಂಭವಾದ ಈ ದಾಳಿಯಲ್ಲಿ ಗಾಜಾ ಉಗ್ರರು ಇಸ್ರೇಲಿ ಯೋಧೆಯೊಬ್ಬಳನ್ನು ಕೊಂದು ಆಕೆಯ ಶವವನ್ನು ನಗ್ನಗೊಳಿಸಿ ತೆರೆದ ವಾಹನದಲ್ಲಿ‌ ಪ್ಯಾಲಿಸ್ತೇನ್‌ನಲ್ಲಿ ಮೆರವಣಿಗೆ ಮಾಡುವ ಮೂಲಕ ಪೈಶಾಚಿಕತೆ ಮೆರೆದಿದ್ದಾರೆ.

ಇವರೆಗೆ ಹಮಾಸ್‌ ಉಗ್ರರು ನಡೆಸಿದ 5 ಸಾವಿರಕ್ಕೂ ಅಧಿಕ ರಾಕೆಟ್‌ಗಳ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಸಾವಿರಾರು ಜನ ಗಾಯಗೊಂಡಿದ್ದಾರೆ. ಟೆಲ್‌ಅವಿವ್‌ ನಗರವಂತೂ ಅಕ್ಷರಶಃ ಮಸಣದಂತಾಗಿದೆ.

ಇನ್ನು ಬಾಲಿವುಡ್‌ ನಟಿ ನುಶ್ರತ್‌ ಭರುಚ್ಚಾ ಅವರು ಹೈಫಾ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ನಲ್ಲಿ ಪಾಲ್ಗೊಳ್ಳಲು ಇಸ್ರೇಲ್‌ಗೆ ತೆರಳಿದ್ದರು.

ಆದರೆ ಅವರು ಇಸ್ರೇಲ್‌ನಲ್ಲಿ ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ.

ನಟಿಯ ತಂಡದ ಸದಸ್ಯರೊಬ್ಬರು ನೀಡಿದ ಮಾಹಿತಿ ಪ್ರಕಾರ ನಿನ್ನೆ (ಶನಿವಾರ) ಮಧ್ಯಾಹ್ನ 12.30ಕ್ಕೆ ಅವರು ನಟಿಯ ಜತೆ ಮಾತನಾಡಿದ್ದಾರೆ. ಆದರೆ, ಉಗ್ರರ ದಾಳಿಯ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಫೋನ್‌ಗೆ ಕರೆ ಮಾಡಲು ಸಾಧ್ಯವಾಗುತ್ತಿಲ್ಲ. ಅವರು ಎಲ್ಲಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಅವರು ಇಸ್ರೇಲ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನಿಸುತ್ತಿದೆ ಎಂದಿದ್ದಾರೆ.

ನಟಿ ನುಸ್ರತ್‌ ಭರುಚ್ಚಾ ಅವರು ಡ್ರೀಮ್‌ ಗರ್ಲ್‌, ಅಕೇಲಿ, ಸೆಲ್ಫಿ, ಜನ್‌ ಹಿತ್‌ ಮೇ ಜಾರಿ ಸೇರಿದಂತೆ ಅನೇಕ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!