ಬೈಲಹೊಂಗಲ : ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ

WhatsApp Group Join Now
Telegram Group Join Now
Instagram Account Follow Now

ಬೈಲಹೊಂಗಲ: ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು‌ ತಾಲೂಕಿನ ಮರಡಿನಾಗಲಾಪೂರ ಗ್ರಾಮದ ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಮುಖ್ಯಶಿಕ್ಷಕರಾದ ಬಸವರಾಜ ಹುಡೇದ ಹೇಳಿದರು. ಪ್ರೊ. ಸಿದ್ಧಣ್ಣ ಲಂಗೋಟಿ ಅವರ ‘ಮಹಾನ್ ದಾರ್ಶನಿಕ ಬಸವಣ್ಣ’ ಗ್ರಂಥ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.12 ನೇ ಶತಮಾನದಲ್ಲಿ ಶರಣರು ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆಯಿಂದ ಸಾರ್ಥಕ ಬದುಕು ಸಾಗಿಸಿದ್ದಾರೆ. ಸರಳ, ಸಾತ್ವಿಕ ವಚನಗಳ ಮೂಲಕ ಶ್ರೇಷ್ಠ ಸಂದೇಶಗಳನ್ನು ನೀಡಿದ್ದಾರೆ. ಅವರ ಆದರ್ಶ, ತತ್ವ, ಸಿದ್ದಾಂತಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದು ಅವರು ಅಭಿಪ್ರಾಯಪಟ್ಟರು.

ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಉದ್ಯೋಗಿ, ಬಸವ ಸಮಿತಿಯ ಬಸವ ಪಥ ಸದಸ್ಯರಾದ ಬೀರಪ್ಪ ಕಂಕನವಾಡಿ ಮಾತನಾಡಿ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಈ ಗ್ರಂಥ ಅತ್ಯಂತ ಉಪಯುಕ್ತವಾಗಿದೆ ಎಂದರು.
ಮಕ್ಕಳು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡರೆ ಉತ್ತಮ ಆಲೋಚನೆಗಳು ಹೊರಹೊಮ್ಮುತ್ತವೆ. ಇದರಿಂದ ಬದುಕಿನಲ್ಲಿ ಸಾಧನೆ ಮಾಡಲು ಸ್ಫೂರ್ತಿ ದೊರೆಯುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಬಸವ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ ಮಾತನಾಡಿ ಕಾಯಕ, ದಾಸೋಹ ತತ್ವಗಳನ್ನು ಜಗತ್ತಿಗೆ ಸಾರಿದ ಶರಣರ ನಡೆ ನುಡಿ ಎರಡೂ ಒಂದೇ ಆಗಿದ್ದವು ಎಂದು ಹೇಳಿದರು. ‘ಮಹಾನ್ ದಾರ್ಶನಿಕ ಬಸವಣ್ಣ’ ಕೃತಿಯು ಬಸವಣ್ಣನವರ ಜೀವನ, ಸಾಧನೆ, ವಿಚಾರಗಳನ್ನೊಳಗೊಂಡ ಮೌಲಿಕ ಗ್ರಂಥವಾಗಿದೆ. ಲೇಖಕರ ದೃಷ್ಟಿಕೋನದ ಜೊತೆಗೆ ಅನೇಕ ಹಿರಿಯ ಸಾಹಿತಿಗಳ ಸಾಹಿತ್ಯಕ ಸಲಹಾ ಉಪಸಮಿತಿ ರಚಿಸಿ ಅವರಿಂದ ಮಾರ್ಗದರ್ಶನ ಪಡೆದುಕೊಂಡಿದ್ದು ಈ ಗ್ರಂಥದ ವಿಶೇಷತೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಕರಾದ ಟಿ.ಜಿ.ಮೇರಿ, ಎಸ್.ಎಂ.ವಿವೇಕಿ, ಎ.ಎಚ್.ಕಲಕುಟಗಿ, ಅರ್.ಸಿ.ಮೋಟೆ, ಸವಿತಾ ನರಸಣ್ಣವರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಿಕ್ಷಕರಾದ ಬಿ.ಎನ್. ತಲ್ಲೂರ್ ಸ್ವಾಗತಿಸಿದರು. ಬಿ.ಎ. ಜಾಬಗೌಡರ ವಂದಿಸಿದರು. ಶಿವಾನಂದ ಕುರಿ ನಿರೂಪಿಸಿದರು.

WhatsApp Group Join Now
Telegram Group Join Now
Instagram Account Follow Now

Vivek Kudarimath, Chief Editor Vivekvarthe, Journalist, Video Editor, Content Writer, CEO Of VPG Digital Private Limited

Leave a Comment