ವಿವೇಕವಾರ್ತೆ: ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಲ್ ಅವರಂತಹ ಕ್ರಿಕೆಟ್ ದಂತಕಥೆಗಳನ್ನು ಹಿಂದಿಕ್ಕಿ ಐಸಿಸಿ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಆರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಮುಡಿಗೇರಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳನ್ನು ಪೂರೈಸಿದರು. ಈ ಸಾಧನೆ ಮಾಡಿದ ಆರನೇ ಕಿವೀಸ್ ಬೌಲರ್ ಮತ್ತು ಹೊಸ ಮೈಲಿಗಲ್ಲು ತಲುಪಿದ ವೇಗದ ಕಿವೀಸ್ ಬೌಲರ್ ಎನಿಸಿಕೊಂಡಿದ್ದಾರೆ.
ಚೆನ್ನೈನ ಚಿಂದಂಬರಂ ಕ್ರೀಡಾಂಗಣದಲ್ಲಿ ಇಂದು ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಸೆಣಸಾಡುತ್ತಿದ್ದು, ಅನುಭವಿ ಬಾಂಗ್ಲಾ ಆಲ್‌ರೌಂಡರ್ ಈ ಸಾಧನೆ ಮಾಡಿದ್ದಾರೆ. 13ನೇ ಓವರ್ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಶಕೀಬ್ ಆಸರೆಯಾದರು. ಮುಶ್ಫಿಕರ್ ರಹೀಮ್ ಜೊತೆಗೆ 96 ರನ್ಗಳ ಪಾಲುದಾರಿಕೆ ಮಾಡಿದ ಅವರು 51 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳಿಂದ 40 ರನ್ ಗಳಿಸಿದರು.
32 ವಿಶ್ವಕಪ್ ಪಂದ್ಯಗಳನ್ನಾಡಿದ ಶಕೀಬ್ ಎರಡು ಶತಕ ಮತ್ತು 10 ಅರ್ಧಶತಕಗಳೊಂದಿಗೆ 42.89 ಸರಾಸರಿಯಲ್ಲಿ 1,201 ರನ್ ಗಳಿಸಿದ್ದಾರೆ. ಅತ್ಯುತ್ತಮ ಸ್ಕೋರ್ 124 ಆಗಿದೆ.