ವಿವೇಕವಾರ್ತೆ : ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆಂದು ಮಾಹಿತಿ ಲಭ್ಯವಾಗಿದೆ.
ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆಳಗಾವಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ದಾಳಿಮಾಡಿದ್ದಾರೆ. ಈ ವೇಳೆ ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದು, ದಂದೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಸ್ಥಳೀಯ ಲಾಡ್ಜ್ ಮಾಲಿಕ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದ ಎಂಬ ಮಾಹಿತಿ ಬೆಳಗಾವಿ ಸಿ.ಎನ್.ಬಿ ಪೊಲೀಸರಿಗೆ ದೊರೆತಿದೆ.
ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಯುವತಿಯರನ್ನು ರಕ್ಷಿಸಲಾಗಿದೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.