spot_img
spot_img
spot_img
spot_img
spot_img
spot_img

ಬೆಳಗಾವಿ: ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ, 300 ಗ್ರಾಂ ಚಿನ್ನಾಭರಣ ವಶ

Published on

spot_img

ಬೆಳಗಾವಿ: ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಳ್ಳುವಲ್ಲಿ ಬೈಲಹೊಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ.

ದೀಪಕ್​ ಪವಾರ್, ರಾಹುಲ್​ ಜಾಧವ್​ ಬಂಧಿತ ಆರೋಪಿಗಳು.
ತಮ್ಮ ಕಚೇರಿಯಲ್ಲಿಂದು ಈ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಅವರು, “ಕಳೆದ ನವೆಂಬರ್ ಅಂತ್ಯ ಮತ್ತು ಡಿಸೆಂಬರ್ ಆರಂಭದಲ್ಲಿ ಬೈಲಹೊಂಗಲ, ನೇಸರಗಿ ಸೇರಿ ಮತ್ತಿತರ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಹಾಗಾಗಿ, ಬೈಲಹೊಂಗಲ ಡಿವೈಎಸ್​ಪಿ ರವಿ ನಾಯಕ ಮತ್ತು ಸಿಪಿಐ ಅವರ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಿದ್ದೆವು.

ಇದರಲ್ಲಿ ಸಿಪಿಐ ಸಾಲಿಮಠ ನೇತೃತ್ವದ ತಂಡ ಮಹಾರಾಷ್ಟ್ರ ರಾಜ್ಯದ ದೀಪಕ್​ ಪವಾರ್​, ರಾಹುಲ್​ ಜಾಧವ್​ ಎಂಬ ಅಂತಾರಾಜ್ಯ ಕಳ್ಳರನ್ನು ಬಂಧಿಸಿದೆ” ಎಂದರು.

ಬಂಧಿತರಿಂದ ಬೈಲಹೊಂಗಲ, ನೇಸರಗಿ, ಹುಕ್ಕೇರಿ ಮತ್ತು ಸಂಕೇಶ್ವರ ಠಾಣಾ ವ್ಯಾಪ್ತಿಯಲ್ಲಿ 10 ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ, 15 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅದೇ ರೀತಿ ಮತ್ತೋರ್ವ ಪ್ರಮುಖ ಆರೋಪಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆತನನ್ನು ಶೀಘ್ರವೇ ಬಂಧಿಸಲಿದ್ದಾರೆ. ಬಂಧಿತ ಕಳ್ಳರ ಗ್ಯಾಂಗ್ ಬೆಳಗಾವಿ ನಗರದಲ್ಲಿ ಕಳ್ಳತನ ಮಾಡಿರುವ ಬಗ್ಗೆ ಯಾವುದೇ ಹೆಜ್ಜೆ ಗುರುತು ಪತ್ತೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಮಧ್ಯರಾತ್ರಿ 1 ರಿಂದ 4ರ ವರೆಗೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ರಾತ್ರಿ ಹೊತ್ತು ಕಳ್ಳತನಗಳು ಸಂಭವಿಸದಂತೆ ಕ್ರಮ ಕೈಗೊಂಡಿದ್ದೇವೆ. ಅಲ್ಲದೇ ಹಗಲಿನಲ್ಲೂ ಕೂಡ ಪೊಲೀಸರು ನಿಗಾವಹಿಸಿದ್ದಾರೆ. ಇನ್ನು‌ ಚಿಕ್ಕೋಡಿ ಭಾಗದಲ್ಲಿ ನಡೆದ ಕಳ್ಳತನ ಪ್ರಕರಣಗಳ ಸಂಬಂಧವೂ ಕೆಲವೊಂದು ಸುಳಿವು ಪತ್ತೆಯಾಗಿದೆ.

ಒಂದು ತಂಡ ಹೊರ ರಾಜ್ಯದಲ್ಲಿ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ಆ ಪ್ರಕರಣಗಳನ್ನು ಭೇದಿಸುತ್ತೇವೆ. ಇನ್ನು ಜಿಲ್ಲೆಯಲ್ಲಿ ಸಿಸಿಟಿವಿಗಳ ಕೊರತೆಯಿದೆ. ಅಲ್ಲದೇ ಈಗ ಇರುವ ಬಹಳಷ್ಟು ಸಿಸಿಟಿವಿಗಳು ಹಾಳಾಗಿವೆ. ಹೊಸದಾಗಿ ಸಿಸಿಟಿವಿ ಅಳವಡಿಸುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿದ್ದೇವೆ” ಎಂದು ಡಾ‌. ಭೀಮಾಶಂಕರ ಗುಳೇದ ಮಾಹಿತಿ ನೀಡಿದರು.

ಇದೇ ವೇಳೆ ಸಿಪಿಐ ಪಿ ವಿ ಸಾಲಿಮಠ ನೇತೃತ್ವದ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!