spot_img
spot_img
spot_img
spot_img
spot_img
spot_img

ನರೇಗಲ್ ಪೊಲೀಸ್ ಪೇದೆಯಿಂದ ಅನುಚಿತ ವರ್ತನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Published on

spot_img

ಗದಗ: ನರೇಗಲ್‍ನ ಪೊಲೀಸ್ (Police) ಪೇದೆಯೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಯುವತಿಯೊಬ್ಬಳು ಮಾಡಿದ್ದ ಆರೋಪಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಪೊಲೀಸ್ ಪೇದೆ ಯುವತಿಯ ವಿರುದ್ಧ ಹನಿಟ್ರ್ಯಾಪ್ (Honey trap) ಆರೋಪ ಮಾಡಿದ್ದಾರೆ.

ಅಮಾನತಾಗಿರುವ ಪೊಲೀಸ್ ಪೇದೆ ಶಂಕರ್, ಯುವತಿ ಜೊತೆಗೆ ನಾನು ಅನೈತಿಕ ಸಂಬಂಧ ಹೊಂದಿರುವುದು ನಿಜ. ನನಗೆ ಗೊತ್ತಾಗದ ಹಾಗೆ ಯುವತಿ ಖಾಸಗಿ ವೀಡಿಯೋ ಮಾಡಿಕೊಂಡು ಬ್ಲಾಕ್‍ಮೇಲ್ ಮಾಡುತ್ತಿದ್ದಾಳೆ. ಆಡಿಯೋ, ಫೋಟೊ ಹಾಗೂ ವೀಡಿಯೋ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.

ಫೋನ್ ಪೇ ಮೂಲಕ ಯುವತಿಗೆ ಹಣ ನೀಡಿರುವ ಬಗ್ಗೆ ದಾಖಲೆ ನೀಡಿ, ಯುವತಿ ಹಿಂದೆ ದೊಡ್ಡ ಜಾಲವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಶಂಕರ್ ಎಸ್‍ಪಿ ಬಳಿ ಮನವಿ ಸಲ್ಲಿಸಿದ್ದಾರೆ.


ಇತ್ತೀಚೆಗೆ ಯುವತಿಯೊಬ್ಬಳು ಪೊಲೀಸ್ ಪೇದೆ ಶಂಕರ್ ವಿರುದ್ಧ ಅನುಚಿತ ವರ್ತನೆ ಆರೋಪ ಮಾಡಿದ್ದಳು. ಈ ಆರೋಪ ಕೇಳಿಬಂದ ಬೆನ್ನಲ್ಲೇ ಅವರನ್ನು ಅಮಾನತು ಮಾಡಲಾಗಿತ್ತು. ಇದೀಗ ಶಂಕರ್ ಅವರು ಹನಿಟ್ರ್ಯಾಪ್ ಆರೋಪ ಮಾಡಿದ್ದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!