spot_img
spot_img
spot_img
spot_img
spot_img
spot_img

Bigg Boss Kannada: ತುಕಾಲಿ ಮಹಾರಾಜರಿಗೆ ಮನೆಮಂದಿಯೆಲ್ಲ ಸೇವಕರು!

Published on

spot_img

Bigg Boss Kannada :ಕೆಲವು ದಿನಗಳ ಹಿಂದೆ ಬಿಗ್‌ಬಾಸ್‌, ಮನೆಯಲ್ಲಿರುವ ಆರು ಸ್ಪರ್ಧಿಗಳಿಗೆ ಅವರ ಆಸೆಗಳನ್ನು ಕೇಳಿತ್ತು. ಈಗ ಅವರ ಆಸೆಗಳನ್ನೆಲ್ಲ ಒಂದೊಂದಾಗಿ ಈಡೇರಿಸುತ್ತಿದ್ದಾರೆ ಬಿಗ್‌ಬಾಸ್. ಆ ಸನ್ನಿವೇಶ ಹೇಗಿದೆ ಎಂಬುದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ. ಡಿಕೆ ಶಿವಕುಮಾರ್ ಬಹಿರಂಗವಾಗಿ ಎಚ್ಚರಿಕೆ ನೀಡಿದ ಮಲ್ಲಿಕಾರ್ಜುನ ಖರ್ಗೆ

‘ತುಕಾಲಿಯವರೆ ಕೆಲಸಮಯಕ್ಕೆ ರಾಜನಂತೆ ಬದುಕಬೇಕು’ ಎಂದು ಬಿಗ್‌ಬಾಸ್‌ ಹೇಳಿದ್ದಾರೆ. ಅದಕ್ಕೆ ಅನುಗುಣವಾಗಿ ಕೆಂಪು ಸೂಟ್ ತೊಟ್ಟುಕೊಂಡ ತುಕಾಲಿ ಮಹಾರಾಜ್‌, ಮರುಕ್ಷಣವೇ ಮನೆಮಂದಿಗೆ ಅಪ್ಪಣೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ₹2,000/- ಬರ ಪರಿಹಾರದ ದುಡ್ಡು ರೈತರ ಖಾತೆಗೆ ಜಮಾ ಆಗಿದೆ! ಯಾವ ರೀತಿ ಚೆಕ್ ಮಾಡಿಕೊಳ್ಳುವುದು?

Bigg Boss Kannada Tukali santosh

‘ಪಿಲ್ಲೊವನ್ನು ತೆಗೆದುಕೊಂಡು ನನಗೆ ಬೀಸು’ ಎಂದು ಕಾರ್ತಿಕ್‌ಗೆ ಅಪ್ಪಣೆ ಮಾಡಿದ್ದಾರೆ. ಅಷ್ಟೇ ಅಲ್ಲ, ತುಕಾಲಿ ಮಹಾರಾಜರ ಮನಗೆಲ್ಲಲು ಬಿಗ್‌ಬಾಸ್‌ ಮನೆಯಲ್ಲಿ ಹೊಸ ರಾಜಕುಮಾರಿ ಅವತರಿಸಿದ್ದಾಳೆ. ಅಪ್ಪಣೆ ಮಾಡುವ ಮುನ್ನವೇ ತುಕಾಲಿ ಅವರಿಗೆ ಅವಸರವಸರವಾಗಿ ಮುತ್ತಿಟ್ಟು ತನ್ನ ಪ್ರೇಮವನ್ನೂ ವ್ಯಕ್ತಪಡಿಸಿದ್ದಾಳೆ. ‘ಎಷ್ಟು ಆತುರದಿಂದ ಕಾಯುತ್ತಿದ್ದೀಯಾ ಎಂದು ಈಗ ಗೊತ್ತಾಯ್ತು’ ಎಂದು ಆ ರಾಜಕುಮಾರಿಯ ಪ್ರೇಮಕ್ಕೆ ಮಹಾರಾಜರೇ ತಬ್ಬಿಬ್ಬಾಗಿದ್ದಾರೆ.

ಅಷ್ಟೇ ಅಲ್ಲ, ಪ್ರತಾಪ್‌ ಕಂಪನಿಯ ಡ್ರೋಣ್‌ ಬಿಗ್‌ಬಾಸ್‌ ಮನೆಯೊಳಗೆ ಲ್ಯಾಂಡ್ ಆಗಿದೆ. ನೀಲಿ ಬಣ್ಣದ ಈ ಡ್ರೋಣ್ ಚೆಲುವೆಯನ್ನು ನೋಡಿ ಪ್ರತಾಪ್‌, ಹಳೆಯ ಪ್ರೇಯಸಿಯನ್ನು ಕಂಡಷ್ಟೇ ಉತ್ಸಾಹದಿಂದ ಮುನ್ನುಗ್ಗಿ ಬಂದು ಎತ್ತಿಕೊಂಡಿದ್ದಾರೆ.

ಬಿಗ್‌ಬಾಸ್‌ನ ಈ ಸೀಸನ್‌ ಕೊನೆಯ ದಿನಗಳು ಭಾವುಕತೆ, ಸಾರ್ಥಕತೆ ಮತ್ತು ಭರಪೂರ ಮನರಂಜನೆಯ ನಗುವಿನಲ್ಲಿ ತುಂಬಿಹೋಗುತ್ತಿದೆ. ಮನೆಯೊಳಗಿನ ಆರು ಸ್ಪರ್ಧಿಗಳೂ ತಮ್ಮೆಲ್ಲ ಜಿದ್ದು ಮರೆತು ಈ ಕ್ಷಣದ ಖುಷಿಯಲ್ಲಿ ಕಳೆದುಹೋಗುತ್ತಿದ್ದಾರೆ. ‘ಹ್ಯಾಪಿ ಬಿಗ್‌ಬಾಸ್’ ಎಂಬ ಟ್ಯಾಗ್‌ ಲೈನ್‌ ಅನ್ನು ಅಕ್ಷರಶಃ ಸತ್ಯವಾಗಿಸುತ್ತಿದ್ದಾರೆ.

ಬಿಗ್‌ಬಾಸ್‌ ಸೀಸನ್ 10 ಫಿನಾಲೆ ಈ ವಾರಾಂತ್ಯದಲ್ಲಿ ನಡೆಯಲಿದ್ದು, ಯಾರು ಗೆಲ್ಲುತ್ತಾರೆ ಎಂಬ ಕೋಟಿ ಜನರ ಕುತೂಹಲಕ್ಕೆ ಉತ್ತರ ಸಿಗಲಿದೆ. ಫಿನಾಲೆಯನ್ನು ಜಿಯೋ ಸಿನಿಮಾ ಆಪ್‌ನಲ್ಲಿ ಉಚಿತವಾಗಿ ಎಲ್ಲಿ ಬೇಕಾದರೂ ನೋಡಬಹುದಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!