spot_img
spot_img
spot_img
spot_img
spot_img
spot_img

Bigg Boss kannada: ದೊಡ್ಮನೆಯಲ್ಲಿ ಡ್ರೋಣ್‌ ಪ್ರತಾಪ್‌ʼಗೆ ಆಗಿದ್ದೇನು: ಇದ್ದಕ್ಕಿದ್ದಂತೆ ಮಾಯವಾಗಿದ್ದು ಯಾಕೆ?

Published on

spot_img

ಬುಧವಾರ ರಾತ್ರಿಯಿಂದಲೇ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಡ್ರೋನ್ ಪ್ರತಾಪ್ (Drone Pratap) ಕಾಣಿಸಿಕೊಂಡಿಲ್ಲ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಬಾರಿ ಕಣ್ಣಿಗೆ ಸೋಪಿನ ನೀರು ಹಾಕಿಸಿಕೊಂಡು ಆಸ್ಪತ್ರೆ (Hospital) ಸೇರಿದ್ದರು. ಆದರೆ, ಈ ಬಾರಿ ಅವರಿಗೆ ಆಹಾರದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆ ಸೇರಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇನ್ನೂ ಕೆಲವರು ಬಿಗ್ ಬಾಸ್ ಮನೆಗೆ ವಾಪಸ್ಸು ಆಗದೇ ಇರುವಂತಹ ಘಟನೆ ನಡೆದಿದೆ ಎಂದೂ ಬರೆದುಕೊಂಡಿದ್ದಾರೆ.

ಫುಡ್ ಪಾಯಿಸನ್ ಆಗಿದೆ ಎಂದು ಕೆಲವು ಮೂಲಗಳು ಮಾಹಿತಿ ನೀಡಿದರೆ, ಇನ್ನೂ ಕೆಲವರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋವಿಡ್ ಸೋಂಕು ಏನಾದರೂ ತಗಲಿರಬಹುದಾ ಎನ್ನುವ ಪ್ರಶ್ನೆಯನ್ನೂ ಮಾಡಿದ್ದಾರೆ. ಹಾಗಾಗಿ ಸಹಜವಾಗಿಯೇ ಡ್ರೋನ್ ಪ್ರತಾಪ್ ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಪ್ರತಾಪ್ ಅವರಿಗೆ ಏನಾಗಿದೆ ಎಂದು ತಿಳಿಸಿ ಎಂದು ವಾಹಿನಿಗೆ ಸೋಷಿಯಲ್ ಮೀಡಿಯಾ ಮೂಲಕ ಕೇಳುತ್ತಿದ್ದಾರೆ.

ಡ್ರೋನ್ ಪ್ರತಾಪ್ ಅವರ ಟೀಮ್ ಹ್ಯಾಂಡಲ್ ಮಾಡುವಂತಹ ಸೋಷಿಯಲ್ ಮೀಡಿಯಾದಲ್ಲಿ ಊಟದಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಿ ಹುಷಾರು ತಪ್ಪಿದ್ದಾರೆ. ಇನ್ನ ಸ್ವಲ್ಪ ಸಮಯದ ಒಳಗೆ ಬಿಗ್ ಬಾಸ್ ಮನೆಗೆ ನಿಮ್ಮ ಡ್ರೋನ್ ಪ್ರತಾಪ್ ಅವರು ತೆರಳಿದ್ದಾರೆ. ಅವರಿಗೆ ವೋಟ್ ಮಾಡಿ’ ಎಂದು ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಮನೆಯ ಅಪ್ ಡೇಟ್ ನೀಡುವಂತಹ ಮತ್ತು ಅದರಲ್ಲಿ ಬಹುತೇಕ ವಿಷಯಗಳು ನಿಜವೂ ಆಗಿರುವಂತಹ ಬಿಬಿಕೆ ಅಪ್ ಡೇಟ್ ಸೋಷಿಯಲ್ ಮೀಡಿಯಾ ಬರೆದುಕೊಂಡಂತೆ ಮತ್ತೆ ಬಿಗ್ ಬಾಸ್ ಮನೆಗೆ ಪ್ರತಾಪ್ ಬರೋದು ಅನುಮಾನ ಎಂದು ಪೋಸ್ಟ್ ಮಾಡಲಾಗಿದೆ. ಹಾಗಾಗಿ ಡ್ರೋನ್ ಅವರಿಗೆ ಏನಾಗಿದೆ ಎನ್ನುವ ಆತಂಕ ಎಲ್ಲರದ್ದು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...

ಘಟಪ್ರಭಾ : ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಸಾವು..!

ಘಟಪ್ರಭಾ : ಬೈಕಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಡಾಣ...

ಮಹಾಭಾರತ ಯುದ್ಧ ಘಟಿಸುವಷ್ಟರಲ್ಲಿ ಶ್ರೀಕೃಷ್ಣನಿಗೆ ಎಷ್ಟು ವಯಸ್ಸಿತ್ತು ಗೊತ್ತಾ..? ಅಚ್ಚರಿಯ ಮಾಹಿತಿ

ಮಹಾಭಾರತ ಅಂದ ಕೂಡಲೇ ಒಂದು ಚಿತ್ರ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಅದು ಕತೆಯು ನಮಗೆ ಕಟ್ಟಿಕೊಟ್ಟ...
error: Content is protected !!