Bigg Boss Kannada: ‌ ದೊಡ್ಮನೆಗೆ ಈ ಬಾರಿ ಯಾರೆಲ್ಲಾ ಸ್ಪರ್ಧಿಗಳು ಬರ್ತಿದ್ದಾರೆ : ಇಲ್ಲಿದೆ ದೊಡ್ಡ ಲಿಸ್ಟ್!

Published on

spot_img
spot_img

ವಿವೇಕವಾರ್ತೆ :ಬಿಗ್ ಬಾಸ್ (Bigg Boss Kannada) ಸ್ಪರ್ಧಿಗಳನ್ನು ಆಯ್ಕೆ ಮಾಡುವುದು ಸುಲಭವಲ್ಲ. ಅವರ ಹಿನ್ನೆಲೆ, ವ್ಯಕ್ತಿತ್ವ ಮತ್ತು ಜನಪ್ರಿಯತೆಯನ್ನು ಗಣನೆಗೆ ತೆಗೆದುಕೊಂಡು ಆಯ್ಕೆ ಮಾಡಲಾಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಇನ್ನೂ ಹಲವಾರು ಟೆಸ್ಟ್ ಗಳನ್ನು ಮಾಡಿಯೇ ದೊಡ್ಮನೆ ಒಳಗೆ ಜನರನ್ನು ಕಳುಹಿಸಲಾಗುತ್ತಿದೆ ಎನ್ನುವ ವಿಚಾರವನ್ನು ಈಗ ಬಹಿರಂಗ ಪಡಿಸಿದ್ದಾರೆ ಕಿಚ್ಚ ಸುದೀಪ್.

ಬಿಗ್ ಬಾಸ್ ಮನೆಯಲ್ಲಿ ಹೊಡೆದಾಡಿಕೊಳ್ಳಬಾರದು, ಅವಮಾನಿಸಬಾರದು, ದೈಹಿಕ ಹಿಂಸೆಯನ್ನು ಮಾಡಬಾರದು ಎಂದೆಲ್ಲ ರೂಲ್ಸ್ ಇವೆ. ಅಹಿತಕರ ಘಟನೆಗಳು ಮನೆಯಲ್ಲಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಸೈಕಿಯಾಟಿಸ್ಟ್ ಟೆಸ್ಟ್, ಮೆಡಿಕಲ್ ಟೆಸ್ಟ್ (Test) ಮಾಡಿಸಿಯೇ ಸ್ಪರ್ಧಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ಕಿಚ್ಚ ಸುದೀಪ್ (Kiccha Sudeep)ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿಯನ್ನು ಹೊರ ಹಾಕಿದರು.

ಕನ್ನಡದ ಬಿಗ್ ಬಾಸ್ ನಾನಾ ಕಾರಣಗಳಿಂದಾಗಿ ವಿಶೇಷ ಮತ್ತು ಹೊಸತು ಅನಿಸುತ್ತದೆ. ಇಂತಹ ಶೋ ಮೂಲಕ ಕಿಚ್ಚ ಸುದೀಪ್ ದಾಖಲೆಯೊಂದನ್ನು ಬರೆದಿದ್ದಾರೆ. ಆ ದಾಖಲೆಯನ್ನು ಸ್ವತಃ ಕಲರ್ಸ್ ಕನ್ನಡ ವಾಹಿನಿಯೇ ಇಂದು ಬಹಿರಂಗ ಪಡಿಸಿದೆ. ಈ ಮೂಲಕ ಸುದೀಪ್‍ ವೃತ್ತಿ ಬದುಕಿಗೆ ಇದೊಂದು ಗೌರವದ ಸಂಗತಿಯೂ ಆಗಿದೆ.

ಭಾರತದಾದ್ಯಂತ ಬಿಗ್ ಬಾಸ್ ಶೋಗಳು ಆಯೋಜನೆಯಾಗಿವೆ. ಹಿಂದಿ, ತಮಿಳು, ತೆಲುಗು ಸೇರಿದಂತೆ ಹಲವು ಕಡೆ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ. ಈ ಎಲ್ಲ ಶೋಗಳಲ್ಲೂ ನಿರೂಪಕರು ಬದಲಾಗಿದ್ದಾರೆ. ಆದರೆ, ಮೊದಲ ಸೀಸನ್ ನಿಂದ ಈವರೆಗೂ ಕನ್ನಡದಲ್ಲಿ ನಿರೂಪಕರು ಬದಲಾಗಿಲ್ಲ. ಸುದೀಪ್ ಅವರೇ ಹತ್ತೂ ಸೀಸನ್ ಗಳನ್ನು ನಡೆಸಿಕೊಂಡು ಬಂದು ದಾಖಲೆ ಬರೆದಿದ್ದಾರೆ. ಇಂತಹ ದಾಖಲೆಯನ್ನು ಬೇರೆ ಯಾವ ಭಾಷೆಯಲ್ಲೂ ನಡೆದಿಲ್ಲ ಎನ್ನುವುದು ವಿಶೇಷ.

ಕೇವಲ ಟಿವಿಯಲ್ಲಿ ಪ್ರಸಾರವಾಗುವ ಶೋ ಮಾತ್ರವಲ್ಲ, ಓಟಿಟಿಗಾಗಿ ಬಿಗ್ ಬಾಸ್ ಆಯೋಜನೆ ಮಾಡಿದ್ದರೂ, ಅದನ್ನೂ ಸುದೀಪ್ ಅವರೇ ನಡೆಸಿಕೊಂಡು ಬಂದಿದ್ದಾರೆ. ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಅಡುಗೆ ರೀತಿಯ ಕಾರ್ಯಕ್ರಮವನ್ನೂ ಅವರು ಆಯೋಜನೆ ಮಾಡಿದ್ದಾರೆ. ಈ ಎಲ್ಲ ಕಾರಣದಿಂದಾಗಿ ಸುದೀಪ್ ವಿಶೇಷ ಅನಿಸುತ್ತಾರೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!