ವಿವೇಕವಾರ್ತೆ;- ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಲೀ ಮೆರಿಡಿಯನ್ ಅಂಡರ್ ಪಾಸ್ ಜಲಾವೃತವಾಗಿದೆ. ಅಂಡರ್ ಪಾಸ್ ನಲ್ಲಿ ನೀರು ತುಂಬಿರುವ ಕಾರಣ ಬ್ಯಾರಿಕೇಡ್ ಹಾಕಿ ಕ್ಲೋಸ್ ಮಾಡಲಾಗಿದೆ.
ಇತ್ತೀಚಿಗಷ್ಟೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಂಡರ್ ಪಾಸ್ ರೆಡಿ ಮಾಡಲಾಗಿತ್ತು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೂಫ್ ಟಾಪ್ ಹಾಕಲಾಗಿತ್ತು. ಇಷ್ಟಾದರೂ ನೀರು ನುಗ್ಗಿ ಅವಾಂತರ ಸೃಷ್ಟಿ ಆಗಿದೆ. ಮತ್ತೊಮ್ಮೆ ಬಿಬಿಎಂಪಿ ಕಳಪೆ ಕಾಮಗಾರಿ ಬಟಾ ಬಯಲಾಗಿದೆ.