Wednesday, September 27, 2023

BREAKING: CCB ಪೊಲೀಸರ ಭರ್ಜರಿ ಬೇಟೆ: ಅಂತರಾಷ್ಟ್ರೀಯ ಮಟ್ಟದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳು ಅಂದರ್

ವಿವೇಕವಾರ್ತೆ : ಮಹತ್ವದ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಮಿನಲ್ ಗಳನ್ನು ಬಂಧಿಸಿದ್ದಾರೆ. ಶ್ರೀಲಂಕಾದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳನ್ನು ಬಂಧಿಸಲಾಗಿದೆ. ಇವರೊಂದಿಗೆ ಆಶ್ರಯ ನೀಡಿದ ವ್ಯಕ್ತಿಯನ್ನು ಕೂಡ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀಲಂಕಾದ ಕಾಸಿನ್ ಕುಮಾರ್, ಅಮಿಲ ನುವಾನ್, ರಂಗ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಗೆ ಆಶ್ರಯ ನೀಡಿದ ಜೈ ಪರಮೇಶ್ ಅಲಿಯಾಸ್ ಜಾಕ್ ಎಂಬುವನನ್ನು ಕೂಡ ಬಂಧಿಸಲಾಗಿದೆ. ಕೊಲೆ ಆರೋಪಿಯಾಗಿರುವ ಜೈಪರಮೇಶ್ ಯಲಹಂಕದ ವಿಶ್ವ ಪ್ರಕೃತಿ ಅಪಾರ್ಟ್ಮೆಂಟ್ ನಲ್ಲಿ ಶ್ರೀಲಂಕಾ ಪಾತಕಿಗಳಿಗೆ ಆಶ್ರಯ ಕಲ್ಪಿಸಿದ್ದ.

ಶ್ರೀಲಂಕಾದಲ್ಲಿ ಕಾಸಿನ್ ಕುಮಾರ್ ವಿರುದ್ಧ 4 ಕೊಲೆ, ಅಮಿಲ ನುವಾನ್ ವಿರುದ್ಧ 5 ಕೊಲೆ ಪ್ರಕರಣಗಳು ದಾಖಲಾಗಿದ್ದು, ರಂಗಪ್ರಸಾದ್ ವಿರುದ್ಧವೂ ಹಲ್ಲೆ, ಕೊಲೆ ಪ್ರಕರಣ ಇರುವ ಮಾಹಿತಿ ಗೊತ್ತಾಗಿದೆ. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ 13 ಮೊಬೈಲ್, ಶ್ರೀಲಂಕಾದ ವಿವಿಧ ವಿಸಿಟಿಂಗ್ ಕಾರ್ಡ್, ಬಸ್ ಟಿಕೆಟ್, ಪೇಪರ್ ಕಟಿಂಗ್ಸ್, ಮನೆ ಬಾಡಿಗೆ ಕರಾರು ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಹಲವು ದಾಖಲೆ ಪಡೆದುಕೊಂಡಿದ್ದಾರೆ.

ಓಮನ್ ದೇಶದಲ್ಲಿ ಬಂದಿತನಾಗಿರುವ ಜಲಾನ್ ಎಂಬ ವ್ಯಕ್ತಿಯ ಆದೇಶದ ಮೇರೆಗೆ ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಶ್ರೀಲಂಕಾ, ಭಾರತ ಮತ್ತು ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ಜಲಾನ್ ಡ್ರಗ್ಸ್ ಟ್ರಾಫಿಕಿಂಗ್ ನಡೆಸುತ್ತಿದ್ದ. ಶ್ರೀಲಂಕಾದ ಎಲ್‌ಟಿಟಿಗೆ ಸೇರಿದ ಈ ಮೂವರು ಮೋಸ್ಟ್ ವಾಂಟೆಡ್ ಕ್ರಿಮಿನಲ್ ಗಳಾಗಿದ್ದಾರೆ. ಶ್ರೀಲಂಕಾದಿಂದ ಭಾರತಕ್ಕೆ ಬೋಟ್ ನಲ್ಲಿ ಬಂದಿದ್ದಾರೆ. 20 ದಿನಗಳ ಹಿಂದೆ ಬೋಟ್ ನಲ್ಲಿ ಚೆನ್ನೈ ಸಮುದ್ರ ತೀರಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!