spot_img
spot_img
spot_img
spot_img
spot_img
spot_img

Breaking News: ಅಕ್ರಮವಾಗಿ ನೆಲೆಸಿದ್ದ ಮೂವರು ವಿದೇಶಿ ಪ್ರಜೆಗಳು ಅರೆಸ್ಟ್

Published on

spot_img

ಮಹಾರಾಷ್ಟ್ರ:- ಅಕ್ರಮವಾಗಿ ನೆಲೆಸಿದ್ದ 23 ರಿಂದ 45 ವರ್ಷ ವಯಸ್ಸಿನ ಮೂವರು ಬಾಂಗ್ಲಾದೇಶ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ.

ಇಲ್ಲಿನ ವಸಾಯಿ ಪ್ರದೇಶದಲ್ಲಿ ವಾಸವಾಗಿದ್ದರು. ಈ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ವಸಾಯಿ ಪೊಲೀಸ್​ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಸಿಎಎ ಕಾಯ್ದೆ ಕೇಂದ್ರ ಜಾರಿಗೆ ತರಲಿದೆ ಎಂದು ಹೇಳಿದ ಬಳಿಕ ಅಕ್ರಮ ಬಾಂಗ್ಲಾ ವಲಸಿಗರು ತಮ್ಮ ದೇಶಕ್ಕೆ ಹಿಂದಿರುಗುತ್ತಿರುವ ಸಂಖ್ಯೆ ಹೆಚ್ಚಳವಾಗಿತ್ತು. ಸಿಎಎ ಕಾಯ್ದೆಯನ್ನು ಜಾರಿಗೆ ತರಲು ಮುಂದಾದ ಕೇಂದ್ರದ ವಿರುದ್ಧ ವಿರೋಧ ಪಕ್ಷಗಳಿಂದ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ಕೋವಿಡ್​ ಸಮಯದಲ್ಲಿ ಹೇಳಿದ್ದರು.

ಪೌರತ್ವ ತಿದ್ದುಪಡಿ ಮಸೂದೆಗೆ ಮಮತಾ ಬ್ಯಾನರ್ಜಿ ಮತ್ತು ಎಡಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪಶ್ಚಿಮ ಬಂಗಾಳದಲ್ಲಿ ಮಸೂದೆ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಮಮತಾ ಘೋಷಿಸಿದ್ದರು. ಬಾಂಗ್ಲಾದೇಶದ ಅಕ್ರಮ ವಲಸಿಗರು ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಒಂದು ಭಾಗವಾಗಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಮೌನವಾಗಿದೆ.

ಹೀಗಾಗಿ ಈ ಬಗ್ಗೆ ಚರ್ಚಿಸಲೇಬೇಕಾಗಿದೆ ಎಂದು ಮಮತಾ ಬ್ಯಾನರ್ಜಿ ಅಂದು ಒತ್ತಾಯಿಸಿದ್ದರು. ಮಮತಾ ಬ್ಯಾನರ್ಜಿ ಅವರು ವೋಟ್​ ಬ್ಯಾಂಕ್​ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರವಾಗಿ ಆರೋಪ ಮಾಡಿತ್ತು.

ಇದುವರೆವಿಗೂ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ಮೇಲೆ ಒಟ್ಟು 764 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳು ದಾಖಲಾಗಿವೆ. ವಿದೇಶಿಯರುಗಳ ವಿರುದ್ಧವೂ 711 ಪ್ರಕರಣಗಳು ದಾಖಲಾಗಿದೆ. ಜೊತೆಗೆ ಒಟ್ಟು 135 ಜನ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಅಕ್ರಮ ವಲಸಿಗರಿಗೆ ನಕಲಿ ಆಧಾರ ಕಾರ್ಡ್ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಮಾಡಿ ಕೊಡುತ್ತಿರುವ ಎಂಟಕ್ಕೂ ಅಧಿಕ ಜನ ಮಧ್ಯವರ್ತಿ ಏಜೆಂಟ್‌ಗಳನ್ನು ಪತ್ತೆ ಮಾಡಿ ಹಲವಾರು ದಾಖಲೆ ಜಪ್ತಿ ಮಾಡಲಾಗಿದೆ ಗೃಹ ಸಚಿವರು ಹೇಳಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!