ವಿವೇಕವಾರ್ತೆ;- ನಮ್ಮ ಮೆಟ್ರೋ ದಲ್ಲಿ ವಿದ್ಯಾರ್ಥಿಗಳ ಹುಚ್ಚಾಟ ಮೆರೆದಿದ್ದಾರೆ. ಮೆಟ್ರೋ ಸರಳುಗಳನ್ನ ಹಿಡಿದು ರೋಲಿಂಗ್ ವ್ಯಾಯಾಮ ಮಾಡಿದ ಸ್ಟೂಡೆಂಟ್ಸ್ ಗೆ ಸಿಬ್ಬಂದಿಯಿಂದ ಖಡಕ್ ವಾರ್ನಿಂಗ್ ನೀಡಲಾಗಿದೆ.
ಹಸಿರು ಲೈನ್ ಮೆಟ್ರೋ ದಲ್ಲಿ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ಯಲಚೇನಹಳ್ಳಿಗೆ ಹೋಗುತ್ತಿದ್ದಾಗ ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದರು. ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ನಿಲ್ಲುವಾಗ ಹಿಡಿಯುವ ಹ್ಯಾಂಡಲ್‌ಗಳನ್ನು ಬಳಸಿ ಅದರಲ್ಲಿ ಸರ್ಕಸ್ ಮಾಡಿದ್ದರು.
ರೋಲಿಂಗ್ ವ್ಯಾಯಾಮ ಮಾಡಿದ ಮೀತ್ ಪಟೇಲ್ ಹಾಗೂ ಇತರ ಮೂವರು ವಿದ್ಯಾರ್ಥಿಗಳ ವರ್ತನೆಗೆ ಸಹಪ್ರಯಾಣಿಕರು ಆಗಲೇ ಕಿಡಿಕಾರಿದ್ದರು. ಆದರೆ, ವಿದ್ಯಾರ್ಥಿಗಳು ಅದಕ್ಕೆ ಕಿವಿಕೊಡದೇ ಉದ್ಧಟತನ ಮುಂದುವರೆಸಿದ್ದರು. ಪ್ರಯಾಣಿಕರು ಈ ಹುಚ್ಚಾಟದ ವಿಡಿಯೋ ಮಾಡಿ ಯಲಚೇನಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿದ್ದ ಭದ್ರತಾ ಸಿಬ್ಬಂದಿಗೆ ನೀಡಿದ್ದರು.
ಯಲಚೇನಹಳ್ಳಿ ಮೆಟ್ರೋ ನಿಲ್ದಾಣದಲ್ಲಿಯೇ ಭದ್ರತಾ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಮೆಟ್ರೋ ಆಸ್ತಿ ದುರ್ಬಳಕೆ ಮಾಡಿದ ವಿದ್ಯಾರ್ಥಿಗಳಿಗೆ 500 ರೂ ದಂಡ ವಿಧಿಸಿ ಮುಂದೆ ಮೆಟ್ರೋದಲ್ಲಿ ಈ ರೀತಿಯ ವರ್ತನೆ ತೋರದಂತೆ ಎಚ್ಚರಿಕೆ ನೀಡಿದ್ದಾರೆ.