ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮಧ್ಯ ರೈಲ್ವೆ(Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2422 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ cr.indianrailways.gov.inಗೆ ಭೇಟಿ ನೀಡಬಹುದು.
ಅಧಿಸೂಚನೆಯಲ್ಲಿ ಪ್ರಕಟವಾಗಿರುವ ಮಾಹಿತಿ ಪ್ರಕಾರ, ಪ್ರಸ್ತುತ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಅಭ್ಯರ್ಥಿಗಳು ಜನವರಿ 15, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಆ ಸಂದರ್ಭದಲ್ಲಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೇ ಅರ್ಜಿ ನಮೂನೆಯನ್ನು ಪಡೆಯಬೇಕು. ಈ ಗಡುವಿನ ಯಾವುದೇ ಬದಲಾವಣೆಯನ್ನು ನೋಟಿಸ್ ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಮೊದಲು ಅಧಿಕೃತ ವೆಬ್ಸೈಟ್ rrccr.com ಗೆ ಭೇಟಿ ನೀಡಬೇಕು.
ಬಳಿಕ ಅಲ್ಲಿ ಕಾಣ ಸಿಗುವ “Click here to apply online” ಆಯ್ಕೆಯನ್ನು ಕ್ಲಿಕ್ ಮಾಡಬೇಕು.
ಆ ಮೂಲಕ ಮುಖಪುಟಕ್ಕೆ ಹೋಗಿ ಅಪ್ರೆಂಟಿಸ್ ನೇಮಕಾತಿ ಲಿಂಕ್‌ಗೆ ಹೋಗಬೇಕು.ಅಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕದೊಂದಿಗೆ ಅದನ್ನು ಸಲ್ಲಿಸಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ ಮಧ್ಯ ರೈಲ್ವೆ
ಹುದ್ದೆ ಅಪ್ರೆಂಟಿಸ್
ಒಟ್ಟು ಹುದ್ದೆ 2422
ವೇತನ ನಿಯಮಾನುಸಾರ
ಉದ್ಯೋಗದ ಸ್ಥಳ ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ 15/01/2023
ಕೇಂದ್ರ ರೈಲ್ವೆ ನೇಮಕಾತಿ 2022: ವಯೋಮಿತಿ
ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 12, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
ಕೇಂದ್ರ ರೈಲ್ವೆ ನೇಮಕಾತಿ 2022: ವಿದ್ಯಾರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ ಅಥವಾ ಪಿಯುಸಿ ಪಾಸಾಗಿರಬೇಕು.