spot_img
spot_img
spot_img
spot_img
spot_img
spot_img

ಚಿಕ್ಕೋಡಿ: ಅಂಕಲಿ ಗ್ರಾಮದಲ್ಲಿ ಅಗ್ನಿ ಅವಘಡ – ಐದು ಮನೆಗಳು ಸುಟ್ಟು ಭಸ್ಮ!

Published on

spot_img

ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಐದು ಮನೆಗಳು ಹಾಗೂ ಒಂದು ಅಂಗಡಿ ಸಂಪೂರ್ಣ ಸುಟ್ಟಿರುವ ಘಟನೆ ಸಂಭವಿಸಿದೆ.

ರಾತ್ರಿ ಒಂದು ಗಂಟೆ ಆಸುಪಾಸಿನಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಇರುವ ಮನೆಗಳಿಗೂ ಹಬ್ಬಿ ಇಷ್ಟೊಂದು ನಷ್ಟಕ್ಕೆ ಕಾರಣವಾಗಿದೆ.

ಘಟನಾ ಸ್ಥಳಕ್ಕೆ ಚಿಕೋಡಿ ಅಗ್ನಿಶಾಮಕ ಸಿಬ್ಬಂದಿಗಳು ಬಂದು ನಾಲ್ಕು ಪೈರ್ ಎಂಜಿನ್ ಗಳ ಮೂಲಕ ಯಶಸ್ವಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿದಾನಂದ ಮೆದಾರ ಮತ್ತು ಮಹಾದೇವ ಮೆದಾರ ಕುಟುಂಬಕ್ಕೆ ಸೇರಿದ 5 ಮನೆಗಳು ಮತ್ತು ದತ್ತಾತ್ರೇಯ ಪರಿಟ್ ಅವರಿಗೆ ಸೇರಿದ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Goat milk: ಮೇಕೆ ಹಾಲು ತಾಯಿ ಹಾಲಿನಷ್ಟೇ ಶ್ರೇಷ್ಠ: ನಾನಾ ಆರೋಗ್ಯ ಸಮಸ್ಯೆಗಳಿಗೆ ಇದರಲ್ಲಿದೆ ಪರಿಹಾರ..!

ಮಾರುಕಟ್ಟೆಯಲ್ಲಿ ಮೇಕೆ ಹಾಲಿಗೆ (Goat Milk) ಭಾರೀ ಡಿಮ್ಯಾಂಡ್ ಬಂದು ಬಹಳ ವರ್ಷಗಳೇ ಕಳೆಯಿತು. ಆದರೂ ಈ ಹಾಲಿನ...

ನಿಮ್ಮ ದೇಹದಲ್ಲಿ ಈ ಬದಲಾವಣೆ ಕಂಡು ಬಂದರೆ ಲಿವರ್ ಡ್ಯಾಮೇಜ್ ಎಂದರ್ಥ!

ಇತ್ತೀಚಿನ ದಿನಗಳಲ್ಲಿ ಹದಗೆಡುತ್ತಿರುವ ಜನರ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಬಹುತೇಕ ಜನರಲ್ಲಿ ಲಿವರ್ ಸಂಬಂಧಿತ ಸಮಸ್ಯೆಗಳು ಕಂಡುಬರುತ್ತಿವೆ. ನಿಮ್ಮ...

ಘಟಪ್ರಭಾ : ಬೈಕ್ ಅಪಘಾತ ಸವಾರ ಸ್ಥಳದಲ್ಲೇ ಸಾವು..!

ಘಟಪ್ರಭಾ : ಬೈಕಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿದ್ದಾನೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಡಾಣ...

ಮಹಾಭಾರತ ಯುದ್ಧ ಘಟಿಸುವಷ್ಟರಲ್ಲಿ ಶ್ರೀಕೃಷ್ಣನಿಗೆ ಎಷ್ಟು ವಯಸ್ಸಿತ್ತು ಗೊತ್ತಾ..? ಅಚ್ಚರಿಯ ಮಾಹಿತಿ

ಮಹಾಭಾರತ ಅಂದ ಕೂಡಲೇ ಒಂದು ಚಿತ್ರ ನಮ್ಮ ಕಣ್ಣ ಮುಂದೆ ಬಂದು ನಿಲ್ಲುತ್ತದೆ. ಅದು ಕತೆಯು ನಮಗೆ ಕಟ್ಟಿಕೊಟ್ಟ...
error: Content is protected !!