spot_img
spot_img
spot_img
spot_img
spot_img

10ನೇ ತರಗತಿ ಬಾಲಕಿಯನ್ನು ಅಪಹರಿಸಿ ಗ್ಯಾಂಗ್‍ರೇಪ್

Published on

spot_img

ವಿವೇಕವಾರ್ತೆ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚರ ಎಸಗಿ ಸೇತುವೆ ಮೇಲಿಂದ ಎಸೆದ ಅಮಾನವೀಯ ಪ್ರಕರಣ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಗ್ವಾಲಿಯರ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪಕ್ಕೆಲುಬುಗಳು ಮತ್ತು ಕಾಲುಗಳು ಮುರಿದಿದ್ದು, ಆಕೆಯ ಖಾಸಗಿ ಭಾಗಗಳಲ್ಲಿ ಗಾಯಗಳಾಗಿವೆ ಎಂದು ತನಿಖಾಧಿಕಾರಿ ಯಶವಂತ್ ಗೋಯಲ್ ತಿಳಿಸಿದ್ದಾರೆ.

ಜ.29ರಂದು ಈ ಘಟನೆ ನಡೆದಿದೆ. ಇದೀಗ ಬಾಲಕಿಗೆ ಪ್ರಜ್ಞೆ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದೂರಿನಲ್ಲಿ, ಬಾಲಕಿ ಕೋಚಿಂಗ್‍ಗೆ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿ ಕ್ರೂರವಾಗಿ ಥಳಿಸಿದ್ದಾರೆ. ನಂತರ ಆಕೆಯನ್ನು ಸೇತುವೆಯಿಂದ ಎಸೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಬಾಲಕಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡ ವ್ಯಕ್ತಿಯೊಬ್ಬರು ಆಕೆಯ ಮನೆಯವರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

ಆರೋಪಿಗಳ ಗುರುತು ಪತ್ತೆಯಾಗಿದ್ದು, ತಲೆಮರೆಸಿಕೊಂಡ ಆರೋಪಿಗಳನ್ನು ಬಂಧಿಸಲು ವಿಶೇಷ ಘಟಕವನ್ನು ರಚಿಸಲಾಗಿದೆ. ಆರೋಪಿಗಳ ವಿರುದ್ಧ ಮಕ್ಕಳ ಲೈಂಗಿಕ ಅಪರಾಧದಿಂದ ರಕ್ಷಣೆ (POCSO), ಮತ್ತು ಐಪಿಸಿ ಸೆಕ್ಷನ್ 376 (ಡಿ) (ಗ್ಯಾಂಗ್‍ರೇಪ್), 366 (ಅಪಹರಣ) ಮತ್ತು 323 (ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಬೆಡ್ ರೂಂನಲ್ಲಿ ಅತ್ತಿಗೆಯ ಪ್ರಿಯಕರನನ್ನ ಹೊಡೆದು ಕೊಂದ ಮೈದುನ!

ವಿವೇಕವಾರ್ತೆ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ...

ಮದ್ವೆಯಾದ 2 ವರ್ಷದಿಂದ ಸರಸಕ್ಕೆ ಒಪ್ಪದ ಗಂಡ! ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಪತ್ನಿ

ವಿವೇಕವಾರ್ತೆ : ದೈಹಿಕ ಸಂಬಂಧಕ್ಕೆ ಒಪ್ಪದ ಗಂಡನ ವಿರುದ್ಧ ಆಕ್ರೋಶಗೊಂಡಿರುವ ಮಹಿಳೆಯೊಬ್ಬಳು ಠಾಣೆಯ ಮೆಟ್ಟಿಲೇರಿ ಎಫ್​ಐಆರ್​ ದಾಖಲಿಸಿರುವ ವಿಚಿತ್ರ...

ಹೈಕೋರ್ಟ್​ನಿಂದ ಎಸಿಬಿ ರದ್ದು: ಎಸಿಬಿಯಲ್ಲಿದ್ದ ಹುದ್ದೆ ಲೋಕಾಯುಕ್ತ & ಪೊಲೀಸ್ ಇಲಾಖೆಗಳಿಗೆ ವರ್ಗಾವಣೆ!

ಬೆಂಗಳೂರು: ಹೈಕೋರ್ಟ್​ನಿಂದ   ಎಸಿಬಿ ರದ್ದು ಹಿನ್ನೆಲೆಯಲ್ಲಿ ಎಸಿಬಿಯಲ್ಲಿದ್ದ ಹುದ್ದೆಗಳನ್ನ ಲೋಕಾಯುಕ್ತ ಸಂಸ್ಥೆ ಮತ್ತು ಪೊಲೀಸ್ ಇಲಾಖೆಗಳಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಎಸಿಬಿಯಲ್ಲಿದ್ದ ಒಟ್ಟು...

ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ 2.67 ಲಕ್ಷ ಸಹಾಯಧನ! ಅರ್ಜಿ ಸಲ್ಲಿಸುವುದು ಹೇಗೆ?

Pm Awas Yojana Subsidy:ನಮಸ್ಕಾರ ಸ್ನೇಹಿತರೇ ,ಇದೀಗ ನಮ್ಮ ದೇಶದಲ್ಲಿ ಜನರ ಸ್ವಂತ ಮನೆ ನಿರ್ಮಾಣದ ಕನಸಿಗೆ ಕೇಂದ್ರ...
error: Content is protected !!