spot_img
spot_img
spot_img
spot_img
spot_img
spot_img

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ!? – ಕೊನೆಗೂ ಮೌನ ಮುರಿದ ನಿಖಿಲ್ ಕುಮಾರಸ್ವಾಮಿ!

Published on

spot_img

ಮಂಡ್ಯ:- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಚರ್ಚೆಗೆ ನಿಖಿಲ್ ಕುಮಾರಸ್ವಾಮಿ ಅವರು ಕೊನೆಗೂ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ ಒತ್ತಡ ಇದೆ. ಆದರೆ ನನ್ನ ಮಾತು ಎಲ್ಲಾ ಸಮಯದಲ್ಲೂ ಒಂದೇ, ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಮಂಡ್ಯ ಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ. ಯಾವುದೇ ಒತ್ತಡ ಬಂದರೂ ನಾನು ಲೋಕಸಭಾ ಚುನಾವಣೆಗೆ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು.

ಎನ್​ಡಿಎ ಮೈತ್ರಿಕೂಟದಲ್ಲಿ ಯಾವ ರೀತಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಆಗಿದೆ. ನನ್ನ ಪ್ರವಾಸ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ಕೋಲಾರ, ಹಾಸನ, ಮೈಸೂರು ಸೇರಿದಂತೆ ಎಲ್ಲಾ ಕಡೆ ಪ್ರವಾಸ ಮಾಡುತ್ತೇನೆ. ನಾನು ಈ ಹಿಂದೆ ಮಂಡ್ಯ ಅಭ್ಯರ್ಥಿ ಆಗಿದ್ದ ಕಾರಣ ಮಂಡ್ಯದಲ್ಲಿ ಹೆಚ್ಚೆಚ್ಚು ಓಡಾಡಲು ಕೇಳಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ ಎಂದು ಹೇಳಿದರು.

ಇನ್ನು ಇದೇ ವೇಳೆ ಮೈತ್ರಿಗೆ ಬಿಜೆಪಿ ನಾಯಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಅಮಿತ್ ಶಾ ಅವರ ಸಭೆಯಲ್ಲಿ ಬಿಜೆಪಿಯ ನಾಯಕರಿಗೆ ಸಂದೇಶ ಹೋಗಿದೆ. ನಮ್ಮ ಕಡೆಯಿಂದ ಯಾವುದೇ ಅಸಮಾಧಾನ ಇಲ್ಲ. ನಾವು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಮೂರನೇ ಬಾರಿ ಮೋದಿ ಪ್ರಧಾನಿ ಆಗಬೇಕೆಂದು ನಮ್ಮ ಆಶಯ. ನಾವು ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಡಲ್ಲ ಎಂದು ತಿಳಿಸಿದರು.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

ಮನೆ ಲೀಜ್ ಪಡೆಯೋ ಗ್ರಾಹಕರೇ ಎಚ್ಚರ -ಬ್ಯಾಂಕಿನವರು ಬೀದಿಗೆ ತಳ್ಳಬಹುದು ಹುಷಾರ್ !

ವಿವೇಕವಾರ್ತೆ: ಅವ್ರು ತಿಂಗಳ ಬಾಡಿಗೆ ಸಹವಾಸ ಬೇಡ ಎಂದು ಲಕ್ಷ ಲಕ್ಷ ಹಣ ಪಾವತಿಸಿ ಅಪಾರ್ಟ್ಮೆಂಟ್ ನಲ್ಲಿ ಪ್ಲಾಟ್...

ಕ್ಯಾನ್ಸರ್‌ಗೆ ಕೊನೆಗೂ ಬಂತು ಮಾತ್ರೆ : ಒಂದು ಮಾತ್ರೆಯ ಬೆಲೆ ಎಷ್ಟು ಗೊತ್ತಾ?

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ...

Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ: ಏನೇನಿದೆ?

ಬೆಂಗಳೂರು- ಹಲವರ ವಿರೋಧದ ನಡುವೆಯೂ ರಾಜ್ಯ ಸರಕಾರ ನಡೆಸಿದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯ...

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್: ಸಿಹಿ ಸುದ್ದಿ ತಿಳಿಸಿದ ರಣವೀರ್ ಸಿಂಗ್

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ....
error: Content is protected !!