spot_img
spot_img
spot_img
spot_img
spot_img
spot_img

ಹೆಂಡತಿ ಅಡುಗೆ ಸರಿ ಮಾಡಲ್ಲ ಎಂದು ದೂರುವುದು ಕ್ರೌರ್ಯವಲ್ಲ: ಹೈಕೋರ್ಟ್‌

Published on

spot_img

ವಿವೇಕವಾರ್ತೆಮಹಿಳೆ ಅಡುಗೆ ಬರಲ್ಲ ಎಂದು ಆಕೆಯ ಗಂಡ ಅಥವಾ ಸಂಬಂಧಿಕರು ಹೇಳುವುದನ್ನು ಕ್ರೌರ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಾಂಗ್ಲಿ ನಿವಾಸಿಯಾಗಿರುವ ಅರ್ಜಿದಾರರ ದೂರನ್ನು ಪರಿಶೀಲಿಸುವಾಗ ಮುಂಬೈ ಹೈಕೋರ್ಟ್ ಈ ರೀತಿ ತಿಳಿಸಿತು. ಮಹಿಳೆಯೊಬ್ಬರು, ಗಂಡನ ಸಂಬಂಧಿಕರು ಅಡುಗೆ ಕೆಲಸ ಬರುವುದಿಲ್ಲವೆಂದು ಹೀಯಾಳಿಸುತ್ತಾರೆಂದು ದೂರು ಸಲ್ಲಿಸಿದ್ದರು. ಆದ್ರೆ ಪೀಠವು ಈ ವಿಷಯವನ್ನು ಕ್ರೌರ್ಯವೆಂದು ಪರಿಗಣಿಸಲಾಗುವುದಿಲ್ಲವೆಂದು ಹೇಳಿ ಅರ್ಜಿಯನ್ನು ರದ್ದುಗೊಳಿಸಿತು.

ತನ್ನ ಸೋದರ ಮಾವ ಸೇರಿದಂತೆ ಅತ್ತೆಯಂದಿರು ತನಗೆ ಅಡುಗೆ ಗೊತ್ತಿಲ್ಲ, ಪೋಷಕರು ತನಗೆ ಏನನ್ನೂ ಕಲಿಸಿಲ್ಲ ಎಂದು ಹೀಯಾಳಿಸಿ ಅವಮಾನಿಸುತ್ತಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅಡಿಯಲ್ಲಿ ಘಟನೆಯನ್ನು ‘ಕ್ರೌರ್ಯ’ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೋರ್ಟ್‌ ಹೇಳಿದೆ. 

ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಮತ್ತು ನ್ಯಾಯಮೂರ್ತಿ ನಿತಿನ್ ಆರ್ ಬೋರ್ಕರ್ ಅವರಿದ್ದ ವಿಭಾಗೀಯ ಪೀಠವು, ಸಾಂಗ್ಲಿ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ದೂರುದಾರ ಮಹಿಳೆಯ ಸೋದರ ಮಾವ ಸಲ್ಲಿಸಿದ ಮನವಿಯನ್ನು ಪರಿಶೀಲಿಸಿ ಈ ವಿಷಯ ತಿಳಿಸಿದ್ದಾರೆ.

ಮಹಿಳೆ ಜುಲೈ 2020 ರಲ್ಲಿ ವಿವಾಹವಾದರು. ಅದೇ ವರ್ಷ ನವೆಂಬರ್‌ನಲ್ಲಿ ಗಂಡನ ಮನೆಯಿಂದ ಹೊರಹಾಕಲಾಯಿತು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿವಾಹವಾದಾಗಿನಿಂದ ತನ್ನ ಪತಿ ತನ್ನೊಂದಿಗೆ ವೈವಾಹಿಕ ಸಂಬಂಧವನ್ನು ತೊಡಗಿಸಲು ಸಾಧ್ಯವಾಗಲ್ಲಿಲ್ಲ. ಅತ್ತೆಯಂದಿರು ತನ್ನನ್ನು ನಿಂದಿಸುತ್ತಾರೆ ಮತ್ತು ಅವಮಾನಿಸುತ್ತಿದ್ದರು ಎಂದು ಮಹಿಳೆ, ಜನವರಿ 2021ರಲ್ಲಿ ದೂರು ದಾಖಲಿಸಿದ್ದಾರೆ.

Source link

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!