spot_img
spot_img
spot_img
spot_img
spot_img
spot_img

ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ್ದ ಮಹಿಳೆಗೆ ಒಂದು ರಾತ್ರಿ ಜೊತೆಗೆ ಕಳೆಯುವಂತೆ ಪೇದೆ ಒತ್ತಡ- ಆರೋಪ

Published on

spot_img

ಕಲಬುರಗಿ: ಪತಿಯೊಂದಿಗೆ ಗಲಾಟೆ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬಳಿಗೆ ಠಾಣೆಯ ಕಾನ್ಸ್‌ಟೇಬಲ್ (Police Constable) ಒಬ್ಬ ಲೈಂಗಿಕ ಕಿರುಕುಳ (Sexual Harassment) ನೀಡಿದ ಆರೋಪ ಕೇಳಿಬಂದಿದೆ.

ಕಮಲಾಪುರ ಪೊಲೀಸ್ (Police) ಠಾಣೆಯ ಕಾನ್ಸ್‌ಟೇಬಲ್ ಬಸವರಾಜ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಮಹಿಳೆ ಗಂಡನ ಜೊತೆ ಗಲಾಟೆ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಈ ವೇಳೆ ಠಾಣೆಯ ಎಸ್‍ಬಿ ಡ್ಯೂಟಿಯಲ್ಲಿದ್ದ ಬಸವರಾಜ್, ಮಹಿಳೆಯ ಪತಿಯನ್ನು ಸರಿದಾರಿಗೆ ತರುವುದಾಗಿ ಹೇಳಿ ಸಲುಗೆ ಬೆಳೆಸಿದ್ದಾನೆ. ಬಳಿಕ ಮಹಿಳೆಯ ಮೊಬೈಲ್ ನಂಬರ್ ಪಡೆದು ಆಕೆಗೆ ಕರೆ ಮಾಡಿ ಬಲವಂತವಾಗಿ ತನ್ನ ಜೊತೆ ಒಂದು ರಾತ್ರಿ ಕಳೆಯುವಂತೆ ಪೀಡಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೇ, ತನ್ನ ಕಾರಿನಲ್ಲಿ ಕರೆದೊಯ್ದು ಬಲವಂತವಾಗಿ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿನ್ನನ್ನು ನಾನು ಮದುವೆಯಾಗುತ್ತೇನೆ, ಗಂಡನನ್ನ ಬಿಟ್ಟು ಬರುವಂತೆ ಒತ್ತಡ ಹೇರಿದ್ದಾನೆ. ಮಹಿಳೆ ಒಪ್ಪದೆ ಇದ್ದಾಗ ಆಕೆಯ ಮೇಲೆ ಕೇಸ್ ಹಾಕಿ, ಆಕೆ ಮತ್ತು ಆಕೆಯ ತಂದೆ-ತಾಯಿಯನ್ನ ಜೈಲಿಗೆ ಕಳಿಸುವ ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾಳೆ.


ಕಾನ್ಸ್‍ಟೇಬಲ್‍ನಿಂದ ಕಿರುಕುಳ ಹೆಚ್ಚಾಗುತ್ತಿದ್ದಂತೆ ಬೇಸತ್ತ ಮಹಿಳೆ ಕಲಬುರಗಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಬಸವರಾಜ್ ವಿರುದ್ಧ ಐಪಿಸಿ ಸೆಕ್ಷನ್ 354(ಎ), 504, 506 ಅಡಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ.

ಕೃಪೆ

spot_img
spot_img
Vivek Kudarimath, Journalist with 8 years of experience. worked In Pepper Media ( Zee Kannada Project ) Worked In BP9 News ( Now it is Newsfirst)

Latest articles

Thief Arrest: ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ: ಸಿಕ್ಕಿಬಿದ್ದಿದ್ದೆ ರೋಚಕ !

ಬೆಂಗಳೂರು:  ಮಾಡಿದ್ದ ಸಾಲ ತೀರಿಸಲು ಕಳ್ಳತನದ ದಾರಿ ಹಿಡಿದಿರುವ ಕಳ್ಳ ಹಾಗೆ  ರಸ್ತೆ ಬದಿ ನಿಲ್ಲಿಸಿದ್ದ ಕಾಂಕ್ರಿಟ್ ಮಿಕ್ಸರ್...

ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ವಾಟ್ಸಪ್ ಅಲ್ಲಿ ಲೀಕ್..!?

12 ನೇ ತರಗತಿಯ ಬೋರ್ಡ್‌ ಪರೀಕ್ಷೆ ಪ್ರಾರಂಭವಾದ ಒಂದು ತಾಸಿಗೂ ಮುಂಚೆನೇ ಪ್ರಶ್ನೆಪತ್ರಿಕೆ ವಾಟ್ಸಪ್‌ ಮೂಲಕ ಸೋರಿಕೆಯಾಗಿರುವ (Question...

Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ 7ನೇ ಕಂತು ಹಣ ಯಾವಾಗ ಬರುತ್ತೆ.? ಕೊನೆಗೂ ಸಿಕ್ತು ಉತ್ತರ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಈಗಾಗಲೇ...

ಪೊಲೀಸರು ಇನ್ಮುಂದೆ ಅಸ್ತಿ ಖರೀದಿ ಅಥವಾ ಮಾರಾಟ ಮಾಡಲು ಅನುಮತಿ ಕಡ್ಡಾಯ

ಅಕ್ರಮ ಆಸ್ತಿ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉನ್ನತ ಹುದ್ದೆಗಳಲ್ಲಿ ಇರುವ ಜನರು ಈ ರೀತಿಯ ಆಸ್ತಿ ಖರೀದಿ...
error: Content is protected !!